NEWSನಮ್ಮರಾಜ್ಯರಾಜಕೀಯ

ನಿರ್ವಾಹಕ ತಿಮ್ಮಪ್ಪನ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಾರಿಗೆ ನೌಕರರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗದ ಚಿಂತಾಮಣಿ ಘಟಕದ ನೌಕರ ತಿಮ್ಮಪ್ಪ ಕರ್ತವ್ಯದಲ್ಲಿ ಇದ್ದ ವೇಳೆ ಹಲ್ಲೆಮಾಡಿದಲ್ಲದೇ, ಜಾತಿನಿಂದನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸಾರಿಗೆ ನೌಕರರು ಒತ್ತಾಯಿಸಿದ್ದಾರೆ.

ಚಿಂತಾಮಣಿ ಘಟಕದ ಮಾರ್ಗ ಸಂಖ್ಯೆ 121/122 ಚಿಂತಾಮಣಿಯಿಂದ ಜೂಲಪಾಳ್ಯ ಕಡೆಗೆ ಹೊಗುತ್ತಿದ್ದ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿ ತನ್ನಪಾಸಿನಲ್ಲಿದ್ದ ಮಾರ್ಗದಲ್ಲಿ ಪ್ರಯಾಣ ಮಾಡದೆ    ಬದಲಿ ಮಾರ್ಗದಲ್ಲಿ ಪ್ರಯಾಣ ಮಾಡುತ್ತಿದ್ದುದ್ದನ್ನು ಗಮನಿಸಿದ ನಿರ್ವಾಹಕ ತಿಮ್ಮಪ್ಪ ನಾಯಕ  ಈ ಪಾಸು ಈ ಮಾರ್ಗದಲ್ಲಿ ಅನುಮತಿ ಇಲ್ಲ ನೀವು ಟಿಕೆಟ್ ಪಡೆದು ಪ್ರಯಾಣ ಮಾಡಿ ಎಂದು ತಿಳಿಸಿದ್ದರು.

ಅಷ್ಟಕ್ಕೇ ಆ ವಿದ್ಯಾರ್ಥಿ ತನ್ನ ಸಂಬಂಧಿಕರನ್ನು ದೂರವಾಣಿ ಕರೆ ಮಾಡಿ ಕರೆಸಿಕೊಂಡು ಶಿಡ್ಲಘಟ್ಟ ತಾಲೂಕಿನ ತುರುಕಾಚೇನಹಳ್ಳಿಯ ಬಳಿ ಬಂದ ಆ ಯುವಕರು ನಿರ್ವಾಹಕರನ್ನು ಇಗ್ಗಾಮುಗ್ಗಾ ತಳಿಸಿದ್ದರು. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಕೆಳಕ್ಕೆ ಬಿದ್ದಾರೆ.

ಬಳಿಕ ನಿರ್ವಾಹಕ ತಿಮ್ಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪರಾಗಿದ್ದಾರೆ.

ಇನ್ನು ಹಲ್ಲೆ ಸಂಬಂಧ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್‌ ಠಾಣೆಯಲ್ಲಿ ನಾಲ್ಕು ಜನರ ವಿರುದ್ಧ ದೂರು ನೀಡಿದ್ದು, ಹಲ್ಲೆ,  ಜಾತಿನಿಂದನೆ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.  ಪೊಲೀಸರು ಹಲ್ಲೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ಶಿಕ್ಷೆಗೊಳಪಡಿಸುವ ಮೂಲಕ ತಿಮ್ಮಪ್ಪ ಅವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಸಾರಿಗೆಯ ಎಲ್ಲ ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?