NEWSನಮ್ಮರಾಜ್ಯ

ಬೇಡಿಕೆಗೆ ಸ್ಪಂದಿಸದ ಸರ್ಕಾರ, ಅಧಿಕಾರಿಗಳ ವಿರುದ್ಧ ಅ.21ರಂದು ಸಾರಿಗೆ ನೌಕರರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಏಪ್ರಿಲ್‌ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿದ್ದು ಈ ಎಲ್ಲ ಪ್ರಕರಣಗಳನ್ನು ವಾಪಸ್‌ ಪಡೆಯದಿದ್ದರೆ ಅಕ್ಟೋಬರ್‌ 21ರಿಂದ ಮತ್ತೆ ಮುಷ್ಕರ ನಡೆಸುವುದಾಗಿ ಬಿಎಂಎಸ್‌ ಸಂಘಟನೆ ಅಧ್ಯಕ್ಷ ಪೂಂಜ ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಒಳಗಾಗಿರುವ ನೌಕರರ ಬದುಕನ್ನು ಸರಿಪಡಿಸುವ ಕುರಿತು ಹಲವಾರು ಬಾರಿ ಸಂಬಂಧಿಸಿದ ಸಚಿವರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಬಿಎಂಎಸ್ ಸಂಘಟನೆಯೊಂದಿಗೆ ಇತರ ಸಂಘಟನೆಗಳು ಸೇರಿ ಈ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳನ್ನು ದಾಖಲಿಸಿರುವ ಬಗ್ಗೆ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿಕೊಡುವಂತೆ ಹಲವಾರು ಸಂಘಟನೆಗಳ ನಾಯಕರು ಹಲವಾರು ಬಾರಿ ಸರ್ಕಾರದ ಮುಖ್ಯ ಮಂತ್ರಿಗಳು, ಮಂತ್ರಿಗಳು, ಸಾರಿಗೆ ಸಚಿವರ ಗಮನಕ್ಕೆ ತಂದು ಸರಿಪಡಿಸಿಕೊಡುವಂತೆ ಮನವಿ ಮಾಡಲಾಗಿದೆ. ಆದಾಗ್ಯೂ ಇದುವರೆಗೂ ಯಾವೊಬ್ಬ ನೌಕರನು ಸಮಸ್ಯೆಯಿಂದ ಹೊರ ಬರಲಾಗಿಲ್ಲ.

ಯಾವುದೇ ಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾಡಿಕೊಡುತ್ತೇವೆ ಎನ್ನುವ ಭರವಸೆ ಗಳಲ್ಲಿಯೇ ಆರೇಳು ತಿಂಗಳು ಕಳೆದು ಹೋಯಿತು. ಇನ್ನೂ ಹೀಗೆ ತಿಂಗಳುಗಟ್ಟಲೇ ಮುಂದುವರಿದರೆ ನಮ್ಮ ಹಲವಾರು ನೌಕರರ ಪರಿಸ್ಥಿತಿ ತೀರ ತಳ ಮಟ್ಟಕ್ಕೆ ತಲುಪುವುದರಲ್ಲಿ ಸಂಶಯವಿಲ್ಲ.

ಹೀಗಾಗಿ ಅ.21ರಂದು ಒಂದುದಿನದ ಪ್ರತಿಭಟನಾ ಧರಣಿ ಮಾಡಲಾಗುವುದು. ಈ ಮೂಲಕ ಸರ್ಕಾರ ಮತ್ತು ಸಾರಿಗೆ ಸಂಸ್ಥೆಯನ್ನು ಎಚ್ಚರಿಸಲಾಗುವುದು ಇದಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...