Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಸಿಎಂ ಕೊಟ್ಟ ಜವಾಬ್ದಾರಿ ಮರೆತ ಸಚಿವರಿಂದ ವಿಜಯೋತ್ಸವ: ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ನಿಯಂತ್ಣ ದೃಷ್ಟಿಯಲ್ಲಿಕೊಂಡು ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿದರೆ ಬೇಜವಾಬ್ದಾರಿ ಸಚಿವರು ವಿಜಯೋಯತ್ಸವ ಆಚರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹಾರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಅಷ್ಟೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಚಿವ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ. ಸೇವೆ ನೀಡಲು ಎಂಬುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ