ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಅನ್ಲಾಕ್ ಘೋಷಣೆಯಾಗಿದೆ. ಎರಡನೇ ಹಂತದಲ್ಲಿ ಅನ್ ಲಾಕ್ ಮಾಡುವ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ, ಇವತ್ತು, ನಾಳೆ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೊರೊನಾ ಕೇಸುಗಳು ಕಡಿಮೆಯಾಗುತ್ತಿರುವುದರಿಂದ ಯೋಚನೆ ಮಾಡಿ, ಎರಡನೇ ಹಂತದ ಅನ್ ಲಾಕ್ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕನ್ನು ನಿಯಂತ್ರಿಸಲು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಸಲಹೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಎರಡನೆಯ ಅಲೆಯ ವೇಳೆ ಇಡೀ ರಾಜ್ಯದಲ್ಲಿ ಲಾಕ್ಡೌನ್ ಘೋಷಿಸಿತ್ತು. ಅದೀಗ ಹಂತಹಂತವಾಗಿ ಅನ್ಲಾಕ್ ಆಗುತ್ತಿದೆ. ಜೂನ್ 21 ರಿಂದ ಅನ್ಲಾಕ್ 2.O ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಗ್ರಿನ್ ಸಿಗ್ನಲ್ ನೀಡಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 21 ರಿಂದ ಏನೆಲ್ಲಾ ಮುಕ್ತವಾಗಿ ಇರುತ್ತೆ, ಯಾವುದಕ್ಕೆಲ್ಲ ನಿರ್ಬಂಧವಿರುತ್ತದೆ ಎಂಬುದರ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಎರಡನೇ ಹಂತದ ಅನ್ಲಾಕ್ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್ಲಾಕ್ 2.O ಜಾರಿಗೆ ಬರುತ್ತದೆ. ಜೂನ್ 21 ರಿಂದ ಮಾಲ್, ಹೋಟೆಲ್, ಚಿಕ್ಕಚಿಕ್ಕ ಮಾರುಕಟ್ಟೆ, ಹೇರ್ ಕಟ್ ಶಾಪ್, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು.
ಬಟ್ಟೆ ಅಂಗಡಿ, ಚಿನ್ನದಂಗಡಿ ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆಗಳು ಸಹ ಜೂನ್ 21 ರಿಂದ ಓಪನ್ ಆಗಲಿವೆ. ದಿನಕ್ಕೆ ಎಂಟು ಗಂಟೆಗಳ ಕಾಲ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶ ಅವಕಾಶ ನೀಡಲಾಗಿದೆ.
ಬಸ್ ಸಂಚಾರ ಆರಂಭ ಸಾಧ್ಯತೆ
ರಾಜ್ಯದಲ್ಲಿ ಅನ್ಲಾಕ್ 2.O ಜಾರಿಯಾಗುವ ಹಿನ್ನೆಲೆಯಲ್ಲಿ ಜೂ.21ರಿಂದ ಕರ್ನಾಟಕದಲ್ಲಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರವಾಗುವ ಸಾಧ್ಯತೆ ಇದೆ.
ಈ ನಡುವೆ ಇವುಗಳ ವಹಿವಾಟು ನಡೆಸಲು ಮೂರನೇ ಹಂತದ ಅನ್ಲಾಕ್ ವರೆಗೂ ಕಾಯಬೇಕು. ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಸಹ ಓಪನ್ ಮಾಡಲು ತಾಂತ್ರಿಕ ಸಲಹಾ ಸಮಿತಿಯಿಂದ ಗ್ರಿನ್ ಸಿಗ್ನಲ್ ದೊರೆತಿದೆ. ಆದರೆ ಥಿಯೇಟರ್, ಪಬ್, ಬಾರ್, ಜಿಮ್, ಸ್ವಿಮ್ಮಿಂಗ್ ಪೂಲ್, ಕ್ರೀಡಾಂಗಣಗಳು ಯಥಾಸ್ಥಿತಿ ಕ್ಲೋಸ್ ಆಗಿರಲಿವೆ. ಇವುಗಳನ್ನೆಲ್ಲ ಓಪನ್ ಮಾಡಲು ಮೂರನೇ ಹಂತದ ಅನ್ಲಾಕ್ ವರೆಗೂ ಕಾಯಲು ತೀರ್ಮಾನ ಮಾಡಲಾಗಿದೆ.