NEWSನಮ್ಮರಾಜ್ಯರಾಜಕೀಯ

ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು : ಸಿದ್ದರಾಮಯ್ಯಗೆ ತಿವಿದ ಮಾಜಿ ಸಿಎಂ ಎಚ್‌ಡಿಕೆ

ಇವರು ಜನರ ಪಾಲಿನ ಮಗ್ಗುಲ ಮುಳ್ಳುಗಳು! ಈಗ ಆಷಾಢಭೂತಿತನ ಏಕೆ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ‘ಎಲೆಕ್ಷನ್’ ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?

ರಾಜಕಾರಣದಲ್ಲಿ ಕ್ಷಣಕ್ಕೊಂದು ಬಣ್ಣ ಬದಲಿಸಿಕೊಂಡು ಓಡಾಡುವವರ ಬಗ್ಗೆ ನನಗೆ ಗೊತ್ತಿದೆ. ಇವರು ರಾಜಕೀಯ ಊಸರವಳ್ಳಿಗಳು, ಜನರ ಪಾಲಿನ ಮಗ್ಗುಲ ಮುಳ್ಳುಗಳು! ಮುಳ್ಳನ್ನು ಹೇಗೆ ತೆಗೆಯಬೇಕು ಎಂಬುದು ಜನರಿಗೆ ಗೊತ್ತಿದೆ, ಆ ಕಾಲವೂ ಹತ್ತಿರದಲ್ಲೇ ಇದೆ ಎಂದು ಎಚ್ಚರಿಸಿದ್ದಾರೆ.

ಇವರು ಅಧಿಕಾರದಲ್ಲಿದ್ದಾಗಲೇ ಕಾಂತರಾಜು ಆಯೋಗದ ವರದಿಯು ಬಂದಿತ್ತು ಆಗಲೇ ಅಂಗೀಕರಿಸಿ ಬಿಡುಗಡೆ ಮಾಡಬಹುದಿತ್ತಲ್ಲ? ಹಾಗೆ ಮಾಡಲಿಲ್ಲ, ಯಾಕೆ? ಅವಕಾಶ ಇದ್ದಾಗ ಮಾಡದೇ ಈಗ ಆಷಾಢಭೂತಿತನ ಏಕೆ? ಜನರಿಗೆ ಅರ್ಥವಾಗದೆಂಬ ಅತಿಬುದ್ಧಿವಂತಿಕೆಯೇ? ಅತಿ ಬುದ್ಧಿವಂತರೆಲ್ಲ ಆಮೇಲೆ ಏನಾದರು ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ಗೊತ್ತಿದೆ.

‘ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ’ ಎಂದು ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಸಹಿಯೇ ಇಲ್ಲದ ವರದಿ ಅಧಿಕೃತ ಹೇಗಾಗುತ್ತದೆ? ಐದು ವರ್ಷ ಆಡಳಿತ ನಡೆಸಿದವರಿಗೆ, ಸಂವಿಧಾನದ ಬಗ್ಗೆ ಹಾದಿಬೀದಿಯಲ್ಲಿ ನಿಂತು ಪಾಠ ಮಾಡುವವರಿಗೆ ಈ ಮಟ್ಟಿಗೆ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಎಲ್ಲದರಲ್ಲೂ ಸಿದ್ಧಹಸ್ತರಾದರೆ ಉಪಯೋಗವೇನು? ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಈ ವರದಿನ್ನೇಕೆ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು ಎಂಬುದಕ್ಕೆ ಉತ್ತರ ನೀಡಲಿ ಎಂದು ಕಿಡಿಕಾರಿದ್ದಾರೆ.

ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ