CrimeNEWSನಮ್ಮರಾಜ್ಯ

ಜಾಮೀನಿ ಸಿಕ್ಕರೂ ವಿನಯ್‍ಕುಲಕರ್ಣಿಗೆ ಇಂದು ಬಿಡುಗಡೆ ಭಾಗ್ಯವಿಲ್ಲ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೊಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಎರಡನೇ ಜಾಮೀನು ಸಿಕ್ಕಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಕೇಸ್‌ಗೆ ಸಂಬಂಧಿಸಿದ ಸಾಕ್ಷ್ಯ ನಾಶ ಪ್ರಕರಣದಲ್ಲಿ ಜನ ಪ್ರತಿನಿಧಿಗಳ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಶನಿವಾರ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಒಂದು ವೇಳೆ ಕೋರ್ಟ್ ನ ಆದೇಶ ಪ್ರತಿ ಜೈಲಿಗೆ ಇವತ್ತೇ ತಲುಪಿದ್ರೆ ಅವರು ಇಂದೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಾಕ್ಷ್ಯ ನಾಶ ಪ್ರಕರಣದಲ್ಲಿ ಕೆಳ ಹಂತದ ನ್ಯಾಯಾಲಯದಿಂದ ನಿನ್ನೆ ಜಾಮೀನು ಸಿಕ್ಕಿದೆ.

ಇನ್ನು ಜಾಮೀನು ಸಿಕ್ಕರೂ ಕೂಡ ಅವರು ಧಾರವಾಡ ಜಿಲ್ಲೆಗೆ ಹೋಗುವಂತಿಲ್ಲ ಮತ್ತು ವಾರಕ್ಕೆ ಎರಡು ಬಾರಿ ಸಿಬಿಐ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಬೇಕು ಎಂಬ ಷರತ್ತನ್ನು ವಿಧಿಸಲಾಗಿದೆ.

ಇನ್ನೂ ಕೋರ್ಟ್‌ನ ಆದೇಶದ ಪ್ರತಿ ಪೋಸ್ಟ್ ಮೂಲಕ ಜೈಲಿಗೆ ತಲುಪಬೇಕು. ಆನಂತರವಷ್ಟೇ ಅವರು ಬಿಡುಗಡೆ ಆಗುತ್ತಾರೆ. ಇಂದು ರಜೆ ದಿನವಾದ ಕಾರಣ ಶೂರಿಟಿ ನೀಡಲು ಸಾಧ್ಯವಿಲ್ಲ ಎನ್ನಲಾಗಿದ್ದು, ಇಂದು ವಿನಯ್‍ಕುಲಕರ್ಣಿ ಬಿಡುಗಡೆ ಸಾಧ್ಯವಿಲ್ಲ ಹಾಗಾಗೀ ಅವರು ನಾಳೆಯೇ ಬಿಡುಗಡೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಹೀಗಾಗಿ ವಿನಯ್‍ಕುಲಕರ್ಣಿ ಇರುವ ಬೆಳಗಾವಿಯ ಹಿಂಡಲಗ ಜೈಲಿಗೆ ಒದಗಿಸಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ