ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಜಿಲ್ಲೆಯ ಮತ್ತು ಅಥಣಿ, ಕಾಗವಾಡ, ರಾಯಭಾಗ, ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ದೂಧಗಂಗಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಮತ್ತು ಕೃಷ್ಣ ನದಿತೀರದ ಗ್ರಾಮಗಳ ನಿವಾಸಿಗಳಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ನದಿ ನೀರಿನ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನ ಮತ್ತು ಜಾನುವಾರುಗಳು ನದಿ ತೀರದ ಕಡೆಗೆ ತೆರಳಬಾರದು. ಇನ್ನೂ ಎರಡು ಮೂರು ದಿನಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿಯುತ್ತದೆ ಎಂದು ಹವಾಮಾನಾ ಇಳಾಖೆ ತಿಳಿಸಿದೆ.
ಕೃಷ್ಣಾ ನದಿಯಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಯಲ್ಲಿ ಐದು ಅಡಿಯಷ್ಟು ನೀರಿನ ಪ್ರಮಾಣ ಹೆಚ್ಚಳ ಕಂಡುಬಂದಿದ್ದು ಜಿಲ್ಲಾಡಳಿತ ಪ್ರವಾಹವನ್ನು ಎದುರಸಿಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಒಂದು ವೇಳೆ ಪ್ರವಾಹ ಸ್ಥಿತಿ ನಿರ್ಮಾಣವಾದರೆ ಜನರು ರಕ್ಷಣೆಗೆ ಧಾವಿಸುವ ಆಯಾ ತಾಲೂಕು ಆಡಳಿತ ಮತ್ತು ರಕ್ಷಣಾ ಪಡೆಗಳೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.