NEWSನಮ್ಮರಾಜ್ಯರಾಜಕೀಯ

ಎಲ್ಲಾ ಕಡೆ ನಾವೇ ಶಂಖ ಊದಲು ಹೋಗಬೇಕು, ಈಗ ಸಮಯವಿಲ್ಲ : ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಲ್ಲಾ ಕಡೆ ಅಭ್ಯ ರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರಮಾಡಲು ನನಗೆ ಸಮಯ ಇಲ್ಲ. ಜೆಡಿಎಸ್‌ನಲ್ಲಿ ಶಂಖ ಊದಲೂ ಜನರಿಲ್ಲ ಎಂಬೂದಾಗಿ ಈಶ್ವರಪ್ಪ ಹೇಳಿದ್ದಾರೆ. ಶಂಖ ಊದಲು ಎಲ್ಲಾ ಕಡೆ ನಾನೇ ಹೋಗಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಏಳು ಕಡೆಮಾತ್ರ ಅಭ್ಯ ರ್ಥಿಗಳನ್ನು ಕಣಕ್ಕಿಳಿಸಿದ್ದೇವೆ.

ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ ಹಾಗೂ ಕೊಡಗಿನಲ್ಲಿ ಮಾತ್ರ ಹೋರಾಟ ನಡೆಸುತ್ತೇವೆ. ಕಳೆದ ಬಾರಿ ನಾಲ್ಕು ಸ್ಥಾನ ಗೆದ್ದಿದ್ದೆವು. ಈ ಬಾರಿ ಅದಕ್ಕಿಂ ತ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು.

ಜಿಟಿಡಿ ಹಾಗೂ ಸಂದೇಶ್ ನಾಗರಾಜ್ ತಿರುಗೇಟು: ಪಕ್ಷಕ್ಕೆ ಯಾರೂ ಅನಿವಾರ್ಯ ಅಲ್ಲ . ಕಾರ್ಯಕರ್ತರು ಶಕ್ತಿ ತುಂಬಿ ನಾಯಕರನ್ನು ಸೃಷ್ಟಿಸುತ್ತಾರೆ ಎಂದು ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಅವರಿಗೆ ತಿರುಗೇಟು ನೀಡಿದರು.

ಸಂದೇಶ್ ನಾಗರಾಜ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಎಚ್.ಡಿ.ದೇವೇಗೌಡ ಹಾಗೂ ರೇವಣ್ಣ ಅವರಿಗೆ ಮಾತ್ರ ಧನ್ಯವಾದ ಅರ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಹಿಂದೆ ಎರಡೂ ಬಾರಿ ಸ್ಪರ್ಧೆಗೆ ಸಹಾಯಮಾಡಿದ ದೇವೇಗೌಡ ಹಾಗೂ ರೇವಣ್ಣ ಅವರನ್ನು ಸ್ಮರಿಸಿ ಕೊಂಡಿದ್ದಾರೆ ಅಷ್ಟೆ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ