NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ ಸರ್ಕಾರ ಇದ್ದಾಗ ಯಾರು ಸತ್ತಿಲ್ಲವಾ: ಸಚಿವ ಈಶ್ವರಪ್ಪ ತಿರುಗೇಟು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಬಿಜೆಪಿ ಸರ್ಕಾರದಲ್ಲಿ ಸಾವು ಖಚಿತ ಅಂತಾ ಡಿ.ಕೆ.ಶಿವಕುಮಾರ್ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತ ಮಾಡುವಾಗ ಜನರು ಚಿರಂಜೀವಿಗಳಾಗಿದ್ದರಾ? ಕಾಂಗ್ರೆಸ್‌ನ ಇಂತಹ ಹೇಳಿಕೆಯಿಂದಲೇ ಜನರು ಅವರನ್ನು ಸೋಲಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಉಚಿತ ಶವಸಂಸ್ಕಾರ ಮಾಡುವ ಬಿಜೆಪಿ ಪ್ರಣಾಳಿಕೆ ಬಗ್ಗೆ ವ್ಯಂಗವಾಡಿರುವ ಕಾಂಗ್ರೆಸ್, ತನ್ನ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿರುವಂತೆ ನೋಡಿಕೊಂಡಿತ ಯಾರು ಸಾಯಲೇ ಇಲ್ಲವಾ, ಶವಸಂಸ್ಕಾರ ಮಾಡಿಯೇ ಇಲ್ಲವಾ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಪ್ರಚಾರಕ್ಕೆ ಹೋಗಿ ಅಂತಾ ಕಾಂಗ್ರೆಸ್ನಲ್ಲಿ ಯಾರು ಸೂಚನೆ ಕೊಡಬೇಕು. ಶಿವಕುಮಾರ ಮಾತು ಯಾರೂ ಕೇಳುವದಿಲ್ಲ. ಇಲ್ಲಿಗೆ ಸಿದ್ದರಾಮಯ್ಯ ಯಾಕೆ ಬರಲಿಲ್ಲ? ಸೋಲುತ್ತೇ ವೆ ಎಂದು ಬೆಳಗಾವಿಗೆ ಯಾವ ಕಾಂಗ್ರೆಸ್‌ ನಾಯಕರು ಬರುತ್ತಿಲ್ಲ ಎಂದರು.

ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಸತ್ತು ಹೋಗಿರುವ ಕಾಂಗ್ರೆಸ್ ಶವ ಸಂಸ್ಕಾರದ ಬಗ್ಗೆ ಅಲ್ಲದೇ ಮತ್ತ್ಯಾವುದರ ಬಗ್ಗೆ ಮಾತನಾಡುತ್ತೆ? ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ಕಾಂಗ್ರೆಸ್ ಬರಲ್ಲ. ಇಲ್ಲೂ ಸಹ ಅದು ಸತ್ತು ಹೋಗಿದೆ ಎಂದರು.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಬಂದಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕಾಂಗ್ರೆಸ್ ಪಕ್ಷ ಮುಂದೆ ಏನು ಮಾಡಲಿದೆ ಎಂಬುದರ ಬಗ್ಗೆ ಹೇಳಿದ್ದರೆ ಚೆನ್ನಾಗಿತ್ತು. ಅದನ್ನ ಬಿಟ್ಟು ದಿ.ಸುರೇಶ್ ಅಂಗಡಿ ಅಂತ್ಯಸಂಸ್ಕಾರವನ್ನು ಬಿಜೆಪಿ ಹೀನಾಯವಾಗಿ ಮಾಡಿತು ಎಂದಿರುವುದನ್ನು ಕೇಳಿ ತುಂಬಾ ನೋವಾಗಿದೆ. ಡಿಕೆಶಿ ಶವಸಂಸ್ಕಾರದ ವಿಚಾರದಲ್ಲೂ ರಾಜಕಾರಣ ಮಾಡುತ್ತಿರುವ ಬಗ್ಗೆ ಬೇಸರವಾಗುತ್ತಿದೆ ಎಂದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...