NEWSನಮ್ಮರಾಜ್ಯ

ನಮ್ಮ ಪಕ್ಷದ ವಿಚಾರ ಬಿಜೆಪಿಗೆರಿಗೆ ಯಾಕೆ ಬೇಕು : ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿಯವರು ಮೆಂಟಲ್ ಗಿರಾಕಿಗಳು. ಅವರಿಗೆ ನಮ್ಮ ಪಕ್ಷದ ವಿಚಾರ ಯಾಕೆ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸುವ ಮೂಲಕ ಖಾರವಾಗಿ ಪ್ರಶ್ನಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ವಿಚಾರದಲ್ಲಿ ತಲೆ ಹಾಕಲು ಅವರು ಯಾರು? ಮೊದಲು ಅವರ ತಟ್ಟೆಯಲ್ಲಿ ಬಿದ್ದಿರೋ ಹೆಗ್ಗಣ ನೋಡಿಕೊಳ್ಳಬೇಕು ಅದನ್ನು ಬಿಟ್ಟು ಇನ್ನೊಬ್ಬರ ತಟ್ಟೆ ನೋಡುವ ಚಾಳಿಯಾಕೆ ಬೆಳೆಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಇದೆ ಎಂಬ ಬಿಜೆಪಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಅರ್ಧಕ್ಕೇ ಭಾಷಣ ಮುಗಿಸಿದರು. ಸಿದ್ದರಾಮಯ್ಯ ಅವರು ಪುನೀತ್‌ ನಮನ ಕಾರ್ಯಕ್ರಮಕ್ಕೆ ಹೋಗಬೇಕಾಗಿದ್ದರಿಂದ ಚಿಕ್ಕದಾಗಿ ಬೇಗ ಭಾಷಣ ಮುಗಿಸಿದರು. ಅದನ್ನು ಮೊದಲೇ ಹೇಳಿದ್ದಾಗಿ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಿದ್ದಾರೆ.

ಆಮೇಲೆ ನಾನು ಮಾತನಾಡಿದೆ. ಅವರು ಯಾರೋ ಬಿಜೆಪಿಯವರು ಏನೇನೋ ಮಾತಾಡ್ತಾರೆ ಅಂದರೆ ಅದಕ್ಕೆಲ್ಲ ಉತ್ತರ ಕೊಡೋಕೆ ಹೋಗಲ್ಲ. ಏನಾದರೂ ಮುಖ್ಯಮಂತ್ರಿಗಳು ಕೇಳಿದರೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.

ಪಕ್ಷದ ಅಧ್ಯಕ್ಷನಾಗಿ ಪಕ್ಷದ ಕಾರ್ಯಕರ್ತರ ಮೇಲೆ ನಿಗಾ ಇಡುವುದು, ನಿಯಂತ್ರಣದಲ್ಲಿಡುವುದರಲ್ಲಿ ತಪ್ಪೇನೂ ಇಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ಚಿಕ್ಕವರಿರಲಿ, ದೊಡ್ಡವರಿರಲಿ ಅವರನ್ನು ಸಂಬಾಳಿಸಬೇಕಾಗುತ್ತದೆ. ಕೆಲವೊಮ್ಮೆ ಕಟ್ಟುನಿಟ್ಟಾಗಿ ವರ್ತಿಸಬೇಕಾಗುತ್ತದೆ. ಕಠಿಣವಾಗಿ ಮಾತಾಡಬೇಕಾಗುತ್ತದೆ. ಆತ್ಮೀಯವಾಗಿ, ಪ್ರೀತಿಯಿಂದಲೂ ನೋಡಬೇಕಾಗುತ್ತದೆ ಎಂದರು.

ನಮ್ಮ ಪಕ್ಷದವರು, ನಮ್ಮವರು, ನಮ್ಮ ಮನೆಯ ಮಕ್ಕಳು ಇದ್ದಂತೆ. ಬೈದರೂ ಪ್ರೀತಿಯಿಂದ ನೋಡುತ್ತಾರೆ. ಗದರಿದರೂ ಪ್ರೀತಿಸುತ್ತಾರೆ. ಅವರನ್ನು ಗದರುತ್ತೇನೆ, ಪ್ರೀತಿಸುತ್ತೇನೆ, ಸಂತೋಷದಿಂದ ನೋಡಿಕೊಳ್ಳುತ್ತೇನೆ. ಇದು ನಮ್ಮ ಮನೆಯ ವಿಷಯ. ಇದು ನನ್ನ ರೂಢಿಗತ ವರ್ತನೆ. ಅದನ್ನು ಹೊಸದಾಗಿ ಏನೂ ಬದಲಾವಣೆ ಮಾಡಲು ಆಗುವುದಿಲ್ಲ ಎಂದರು.

ಜಮೀರ್ ಅಹಮದ್ ಖಾನ್ ಅವರು ನಿನ್ನೆ ಕಾರ್ಯಕ್ರಮಕ್ಕೆ ಬಂದಿಲ್ಲ ಅಂತಾ ಇಷ್ಟೆಲ್ಲ ಪರಿಸ್ಥಿತಿ ನಿರ್ಮಾಣ ಆಯಿತಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ಪಾಪ ಅವರೆಲ್ಲೋ ದಿಲ್ಲಿಯಲ್ಲಿ ಇದ್ದರು. ಅವರ ಕೆಲಸ ಅವರು ಮಾಡುತ್ತಾ ಇದ್ದಾರೆ ಎಂದು ತಿಳಿಸಿದರು.

ಇನ್ನು ಎಲ್ಲರಿಗೂ ಬೆಂಬಲಿಗರು ಇದ್ದಂತೆ ಅವರಿಗೂ ಇದ್ದಾರೆ. ಅದನ್ನು ಇದಕ್ಕೆ ತಳಕು ಹಾಕೋದು ಸರಿಯಲ್ಲ ಎಂದು ಬಿಜೆಪಿಗರಿಗೆ ತಿರುಗೇಟು ನೀಡಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...