ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣದ ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಥಳಕ್ಕೆ ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಸುಧಾಕರ್ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕಶವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಅಂತೆಯೆ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದರು.
ಇದೇ ವೇಳೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಈ ಅಕ್ರಮದಲ್ಲಿ ಭಾಗಿಯಾಗಿರುವವರು ಯಾವ ಪಕ್ಷದವರೇ ಆಗಿದ್ದರೂ ಅವರು ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
ಇದೇ ವೇಳೆ ಅವಘಡದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.