ಮೈಸೂರು: ವಿಶ್ವವಿಖ್ಯಾತ ದಸರಾ ಆಚರಣೆ ಬಗ್ಗೆ ಹೈಫವರ್ ಕಮಿಟಿ ಸಭೆಯನ್ನು ಬೆಂಗಳೂರಿನಲ್ಲಿ ಸೆ.8ರಂದು ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಇದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಯಾವ ರೀತಿ ಆಚರಣೆ ಮಾಡಬೇಕೆಂದು ಅಂದಿನ ಸಭೆಯಲ್ಲಿ, ನಿರ್ಧರಿಸಲಾಗುತ್ತದೆ ಎಂದು ಹೇಳಿದರು.
ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕು
ಇನ್ನು ಮುಂಬರುವ ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ , ಸ್ಥಳೀಯ ಸಂಸ್ಥೆ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಬೇಕು. ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಿಳಿಸುವ ಮೂಲಕ ಹೆಚ್ಚಿನ ರೀತಿಯಲ್ಲಿ ಪ್ರಚುರಪಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ನಮ್ಮ ಪಕ್ಷವನ್ನುಎಲ್ಲಾ ಕಡೆ ಅಧಿಕಾರಕ್ಕೆ ತರಲು ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಲು ಬೇಕು ಎಂದು ಕರೆ ನೀಡಿದರು.