ಮೈಸೂರು: ಜಲ್ ಜೀವನ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಉದ್ದೇಶದಿಂದ ತಯಾರಿಸಲಾದ `ವಿಲೇಜ್ ಆಕ್ಸನ್ ಪ್ಲಾನ್’ ಕುರಿತು ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿ ಅನುಮೋದನೆ ನೀಡಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಜಿಲ್ಲೆಗೆ ಒಳಪಡುವ ಎಲ್ಲಾ ತಾಲೂಕಿನ ಗ್ರಾಮ ಪಂಚಾಯಿತಿಯವರು ಆಯಾ ಗ್ರಾಮದ `ವಿಲೇಜ್ ಆಕ್ಸನ್ ಪ್ಲಾನ್’ ತಯಾರಿಸಿ ಗ್ರಾಮಸಭೆಯಲ್ಲಿ ಮಂಡಿಸಿ ಅನುಮೋದನೆಗೊಂಡ ನಂತರ ಜಿಲ್ಲಾಮಟ್ಟದಲ್ಲಿ ಚರ್ಚಿಸಿ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಯಿತು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿರುವ 746 ಗ್ರಾಮಗಳಲ್ಲಿ ವಾಸಿಸುವ ಒಬ್ಬ ವ್ಯಕ್ತಿಗೆ 55 ಎಲ್ಪಿಸಿಡಿ ನೀರನ್ನು ಒದಗಿಸುವುದು ಹಾಗೂ ಅಂಗನವಾಡಿ, ಶಾಲೆಗಳು ಸೇರಿದಂತೆ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ಕುಡಿಯುವ ನೀರನ್ನು ಒದಗಿಸುವ ಕ್ರಿಯಾ ಯೋಜನೆ ಕುರಿತು ಚರ್ಚಿಸಲಾಯಿತು.
ಈ ಸಂಬಂಧ ಸಭೆಯಲ್ಲಿ ಮಂಡಿಸಿ ಮುಂದಿನ 2023-24 ರಲ್ಲಿ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಪ್ರಮುಖವಾಗಿ ಶಾಲೆಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಬಾರದು. ಶಾಲೆಯ ಸಮೀಪದಲ್ಲಿರುವ ಪೈಪ್ಲೈನ್ ಮೂಲಕ ಪ್ರತೀ ಶಾಲೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಯಿತಿ ಅಭಿವೃದ್ಧಿ ಉಪಕಾರ್ಯದರ್ಶಿ ಡಾ.ಕೃಷ್ಣರಾಜು, ಕುಡಿಯುವ ನೀರಿನ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಪಾಂಡುರಂಗ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಹಂತೇಶಪ್ಪ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail