NEWSದೇಶ-ವಿದೇಶನಮ್ಮರಾಜ್ಯ

ನೌಕರರಿಗೆ ವೇತನ, ಪಿಂಚಣಿ ವಿಳಂಬವಾದರೆ ಶೇ.6 ಬಡ್ಡಿ ಸೇರಿಸಿ ಕೊಡಲು ಸುಪ್ರೀಂ ಕೋರ್ಟ್‌ ಆದೇಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ವೇತನ, ಪಿಂಚಣಿ ಸಮಯಕ್ಕೆ ಸರಿಯಾಗಿ ಪಡೆಯುವುದು ನೌಕರರ ಹಕ್ಕು. ಹೀಗಾಗಿ ಸರ್ಕಾರಿ ನೌಕರರ ವೇತನ ಪಿಂಚಣಿ ಪಾವತಿ ವಿಳಂಬವಾದರೆ ಅದಕ್ಕೆ ತಕ್ಕನಾದ ಬಡ್ಡಿಯನ್ನು ಕೂಡ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಸ್ವಲ್ಪ ಕಾಲದವರೆಗೆ ಸರ್ಕಾರದಿಂದ ಪಿಂಚಣಿ ಮತ್ತು ವೇತನ ಮುಂದೂಡಿದ್ದ ಪ್ರಕರಣದಲ್ಲಿ ಶೇ.6ರಷ್ಟು ಬಡ್ಡಿ ನೀಡುವಂತೆ ಸುಪ್ರೀಂಕೋರ್ಟ್ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಇದೇ ಪ್ರಕರಣದಲ್ಲಿ ಹೈ ಕೋರ್ಟ್‌ ಶೇ. 12ರಷ್ಟು ಬಡ್ಡಿಯನ್ನು ನಿಗದಿಪಡಿಸಿತ್ತು.

ಕೊರೊನಾ ಸೋಂಕಿನ ಕಾರಣದಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ನೌಕರರ ವೇತನ ಮತ್ತು ಪಿಂಚಣಿಯನ್ನು 2020 ರ ಮಾರ್ಚ್ ಏಪ್ರಿಲ್‌ನಲ್ಲಿ ಸ್ವಲ್ಪ ಸಮಯದವರೆಗೆ ಮುಂದೂಡಿತ್ತು.

ಈ ಬಗ್ಗೆ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ತಡೆಹಿಡಿಯಲಾಗಿದ್ದ ವೇತನ ಮತ್ತು ಪಿಂಚಣಿ ಪಾವತಿಸಬೇಕು ಎಂದು ಒತ್ತಾಯಿಸಿದ್ದರು. ಅಲ್ಲದೆ ಸಮಯಕ್ಕೆ ಸರಿಯಾಗಿ ವೇತನ ಪಿಂಚಣಿ ಪಡೆಯುವುದು ನೌಕರರ ಹಕ್ಕು ಎಂದು ಹೈಕೋರ್ಟ್ ಗೆ ಮನವಿ ಮಾಡಿದ್ದರು.

ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆದು ಸರ್ಕಾರ ಪ್ರತಿ ತಿಂಗಳ ಕೊನೆಯ ದಿನಾಂಕದಂದು ನೌಕರರಿಗೆ ವೇತನ, ಪಿಂಚಣಿ ಪಾವತಿಸಬೇಕು ಎಂದು ಹೈ ಕೋರ್ಟ್ ಆದೇಶ ನೀಡಿತ್ತು. ಇನ್ನು ಇಲಾಖೆ ವಿಚಾರಣೆ, ನ್ಯಾಯಾಂಗ ಪ್ರಕ್ರಿಯೆಯಲ್ಲಿ ನೌಕರರ ತಪ್ಪಿತಸ್ಥರಾಗಿದ್ದರೆ ಅಂಥವರಿಗೆ ಪಿಂಚಣಿ ನಿಲ್ಲಿಸಬಹುದಾಗಿದೆ ಎಂದು ತಿಳಿಸಿ, ಈಗ ತಡೆ ಹಿಡಿದಿರುವ ಪಿಂಚಣಿಗೆ ಶೇ. 12ರಷ್ಟು ಬಡ್ಡಿಯೊಂದಿಗೆ ಪಾವತಿಸಬೇಕೆಂದು ಹೈಕೋರ್ಟ್ ಆದೇಶಿಸಿತ್ತು.

ಈ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಆಂಧ್ರ ಪ್ರದೇಶ ಸರ್ಕಾರ ಪ್ರಶ್ನಿಸಿ, ಕೊರೊನಾ ಸಂಕಷ್ಟದಿಂದ ನೌಕರರ ವೇತನ, ಪಿಂಚಣಿ ಮುಂದೂಡಲಾಗಿದೆ ಎಂದು ತಿಳಿಸಿತ್ತು. ಉತ್ತಮ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಸರಕಾರ ಹೇಳಿತ್ತು. ಆದರೆ ಇದನ್ನು ಒಪ್ಪದ ಸುಪ್ರೀಂಕೋರ್ಟ್ ವೇತನ ಮತ್ತು ಪಿಂಚಣಿ ವಿಳಂಬವಾದ ಕಾರಣ ಶೇ. 6ರಷ್ಟು ಬಡ್ಡಿ ಪಾವತಿಸುವಂತೆ ಆದೇಶಿಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು