NEWSಆರೋಗ್ಯನಮ್ಮಜಿಲ್ಲೆ

ಡೆಂಗ್ಯೂ, ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಶೀಘ್ರ ಕ್ರಮ ಕೈಗೊಳ್ಳಿ: ಮೋಹನ್ ದಾಸರಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಳಿಗಾಲ ಹತ್ತಿರವಿದ್ದು ಈಗಾಗಲೇ ಡೆಂಗ್ಯೂ ಹಾಗೂ ಚಿಕೂನ್‌ಗುನ್ಯ ಪ್ರಕರಣಗಳು ನಗರದಾದ್ಯಂತ ವ್ಯಾಪಕವಾಗಿ ವರದಿಯಾಗುತ್ತಿವೆ. ಈ ರೋಗಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದರು.

ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಇದೇ ಸಮಯಕ್ಕೆ ಬಿಬಿಎಂಪಿ ವ್ಯಾಪ್ತಿಯಲ್ಲಿ 698 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ಪ್ರಸ್ತುತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲೇ 8 ಸಾವಿರಕ್ಕೂ ಅಧಿಕ ಮಂದಿ ಬಳಲಿದ್ದರು. 2014ರಿಂದ ಡೆಂಗ್ಯೂ ಪ್ರಕರಣಗಳು ಏರುಗತಿಯಲ್ಲಿ ಸಾಗಿದ್ದು, 2018ರಲ್ಲಿ ನಿಯಂತ್ರಣಕ್ಕೆ ಬಂದಿತ್ತು. ಈ ವರ್ಷ ಕೊರೊನಾ ಜತೆಗೆ ಇದು ಸೇರಿಕೊಂಡರೆ ಜನರ ಬದುಕು ಮೂರಾಬಟ್ಟೆ ಆಗುವುದು ಖಚಿತ ಎಂದರು.

ಬಿಬಿಎಂಪಿ ದೆಹಲಿ ಸರ್ಕಾರದ ಮಾದರಿಯಲ್ಲಿ 10 ಗಂಟೆ 10 ನಿಮಿಷ, 10 ಸೆಕೆಂಡ್ ಯೋಜನೆಯಂತೆ ಡೆಂಗ್ಯೂ ಹಾಗೂ ಚಿಕೂನ್‌ಗುನ್ಯಾ ತಡೆಗೆ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಸಚಿವ ಡಾ.ಸುಧಾಕರ್ ಇಲಾಖೆಯ ನೇತೃತ್ವವಹಿಸಿದ ಮೇಲೆ ಕೊರೊನಾ ವರದಿಗಳು ಕಡಿಮೆ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಮಾನಕ್ಕೆ ಕಾರಣವಾಗಿದೆ. ನಾನು ಬಂದ ಮೇಲೆ ಸೋಂಕು ನಿಯಂತ್ರಿಸಿದೆ ಎನ್ನುವ ಪ್ರತಿಷ್ಠೆಗೆ ಬಿದ್ದಿರುವ ಸಚಿವರು ಸಾಕಷ್ಟು ಪ್ರಮಾಣದಲ್ಲಿ ಕೊರೊನಾ ಟೆಸ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಪ್ರತಿಷ್ಠೆಯನ್ನು ಬಿಟ್ಟು ಸಚಿವರು ಜನರ ಪ್ರಾಣ ರಕ್ಷೆಣೆಗೆ ಯಾವ ಕ್ರಮ ಕೈಗೊಳ್ಳಬೇಕೊ ಅದನ್ನು ಮಾಡಲಿ ಎಂದು ವ್ಯಂಗ್ಯವಾಡಿದರು.

ಬೆಂಗಳೂರು ಸುತ್ತ ಮುತ್ತಲಿನ ಕೆರೆಗಳು ಉತ್ತಮ ಮಳೆಗೆ ತುಂಬಿವೆ ಹಾಗೂ ಖಾಲಿ ನಿವೇಶನಗಳಲ್ಲಿ ಹಸಿರು ಹೆಚ್ಚಾಗಿರುವ ಕಾರಣ‌ ಸೊಳ್ಳೆಗಳ ಉತ್ಪತ್ತಿ ನಿಯಂತ್ರಣ ಮೀರಿದೆ. ಈ ಕೂಡಲೇ ಬಿಬಿಎಂಪಿ ಆರೋಗ್ಯ ವಿಭಾಗ ಹಾಗೂ ಆರೋಗ್ಯ ಸಚಿವರು ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.

ಕೊರೊನಾ ವಾರಿಯರ್ಸ್‌ಗಳನ್ನು ಸೋಂಕು ನಿಯಂತ್ರಣಕ್ಕೆ ನೇಮಿಸಿದಂತೆ ಈ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಮುಖಂಡರಾದ ಬಸವರಾಜ ಮುದಿಗೌಡರ್, ಮುತ್ತುರಾಜ್ ಇದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?