NEWSವಿಜ್ಞಾನಶಿಕ್ಷಣ-

ನಿತ್ಯದ ಕಾರ್ಯದಲ್ಲಿ ಯೋಗವೂ ಒಂದಾಗಿರಲಿ: ಕೃಷಿ ಸಚಿವ ಬಿ.ಸಿ.ಪಾಟೀಲ್‌

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 21ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮತಕ್ಷೇತ್ರ ಬಯಲು ಬಸವದೇವರ ದೇವಸ್ಥಾನದ ಪ್ರಾಂಗಣದಲ್ಲಿ ಅರ್ಚಕರಾದ ನಿಂಗಾಚಾರ್ ಮಾಯಾಚಾರ್ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೊಂದಿಗೆ ಯೋಗ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗ ಎನ್ನುವುದು ನಮ್ಮ ದೇಶದ ಪ್ರಾಚೀನ ಪದ್ಧತಿಯಾಗಿದ್ದು, ಯೋಗದ ಮಹತ್ವ ಇಡೀ ವಿಶ್ವಕ್ಕೆ ಸಾರಿದೆ. ಯೋಗವು ಭಾರತೀಯ ಮೂಲದ ಸುಮಾರು 6 ಸಾವಿರ ವರ್ಷ ಹಳೆಯದಾದ, ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದರು.

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಸಂಸ್ಥೆಯ ತಮ್ಮ ಭಾಷಣದಲ್ಲಿ ವರ್ಷದ ಅತಿ ದೀರ್ಘ ದಿನವಾದ ಜೂನ್ 21 ರಂದು ವಿಶ್ವ ಯೋಗ ದಿನ ಆಚರಿಸುವಂತೆ ಕರೆ ನೀಡಿದರು. ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಹೊಸದಿಲ್ಲಿಯ ರಾಜಪಥ್‍ನಲ್ಲಿ ನೆಡೆಸಲು ಭಾರತ ಸರ್ಕಾರ ಕಾರ್ಯಕ್ರಮ ರೂಪಿಸಿತ್ತು ಎಂದರು.

ಯೋಗವೆನ್ನುವುದು ಆಚರಣೆಯಾಗದೇ ದೈನಂದಿನ ಭಾಗವಾಗಬೇಕು. ಯೋಗದಿಂದ ಫಿಟ್ ಆಂಡ್ ಫೈನ್ ಆಗಿರಬಹುದು. ಸದೃಢ ಆರೋಗ್ಯದ ಗುಟ್ಟು ಇದಾಗಿದ್ದು, ಮಾನಸಿಕ ಸ್ಥೈರ್ಯಕ್ಕೆ ಯೋಗ ಸಾಧನವಾಗಿದೆ. ಪ್ರತಿದಿನ 15 ನಿಮಿಷ ಒಂದೆರಡು ಆಸನವನ್ನಾದರೂ ದೈನಂದಿನ ರೂಢಿ ಮಾಡಿಕೊಳ್ಳಬೇಕು. ಯೋಗವೆನ್ನುವುದು ದೈಹಿಕ ಪ್ರಶಿಕ್ಷಣ ಮಾತ್ರವಲ್ಲದೇ ಮಾನಸಿಕ ಸಾಧನೆಯೂ ಆಗಬೇಕೆಂದು ಕರೆ ನೀಡಿದರು.

ಯೋಗ ದಿನಾಚರಣೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಶಿವಕುಮಾರ್ ತಿಪ್ಪಶೆಟ್ಟಿ, ಕಂಠಾದರ ಅಂಗಡಿ, ರಮೇಶ್, ಕುಸುಮ ಬಣಕಾರ್, ಲತಾ ಬಣಕಾರ್ ಮತ್ತಿತ್ತರರು ಪಾಲ್ಗೊಂಡಿದ್ದರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ