NEWSನಮ್ಮರಾಜ್ಯರಾಜಕೀಯಶಿಕ್ಷಣ-

ಬೆಂಗಳೂರು ವಿವಿ ಜಾಗ ಯೋಗ ವಿವಿ  ಸೇರಿ ಮೂರು ಸಂಸ್ಥೆಗಳಿಗೆ ಪರಭಾರೆ: ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜೀವವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿವಿ ಮತ್ತು ಇತರ ಎರಡು ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ ಎಂದು ಸರಣಿ ಟ್ವೀಟ್‌ ಮೂಲಕ  ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿರಿಯ ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲ ಸೂಚಿಸಿದ್ದಾರೆ ಎಂದು ವಿವರಿಸಿದ್ದಾರೆ.

ಯೋಗ ವಿವಿಗೆ 15 ಎಕರೆ, ಗುಲ್ಬರ್ಗಾ ವಿವಿಗೆ 15 ಎಕರೆ ಸಿ.ಬಿ.ಎಸ್.ಇ. ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಈ ಜೀವವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ 20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ,ಪ್ರಾಣಿಶಾಸ್ತ್ರ,ಭೂಗರ್ಭಶಾಸ್ತ್ರ, ಪರಿಸರವಿಜ್ಞಾನ,ಸಾಮಾಜಿಕವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ. ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು. ಬೆಳೆಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು