Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಕಸ ನಿರ್ವಹಣೆ ಶುಲ್ಕ ಹಿಂಪಡೆಯದಿದ್ದರೆ ಬಿಬಿಎಂಪಿಗೆ ತೆರಿಗೆ ಕಟ್ಟಲ್ಲ : ಎಎಪಿಯ ಪೃಥ್ವಿ ರೆಡ್ಡಿ ಎಚ್ಚರಿಕೆ

ಕಸ ನಿರ್ವಹಣೆ ಶುಲ್ಕ ಹೆಚ್ಚಳದ ವಿರುದ್ಧ ಎಎಪಿ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಸ ನಿರ್ವಹಣೆ ಶುಲ್ಕವನ್ನು 200 ರಿಂದ 600 ರೂ.ಗೆ ಹೆಚ್ಚಳ ಮಾಡಿ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ ಹಾಗೂ ಈ ಶುಲ್ಕ ಸಂಗ್ರಹ ಜವಾಬ್ದಾರಿಯನ್ನು ಬೆಸ್ಕಾಂಗೆ ನೀಡುವ ಬಿಬಿಎಂಪಿಯ ಈ ತೀರ್ಮಾನವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಈ ಕೂಡಲೇ ಈ ತೀರ್ಮಾನವನ್ನು ಹಿಂಪಡೆಯದೇ ಹೋದರೆ ಬಿಬಿಎಂಪಿ ವಿಧಿಸುವ ಯಾವುದೇ ತೆರಿಗೆಗಳನ್ನು ಕಟ್ಟದೆ ಬೆಂಗಳೂರಿನಲ್ಲಿ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಎಚ್ಚರಿಕೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೈಸೂರು ಬ್ಯಾಂಕ್ ವೃತ್ತದಲ್ಲಿ ಆಮ್ ಆದ್ಮಿ ಪಕ್ಷದಿಂದ ಬುಧವಾರ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ನಾಚಿಕೆಗೆಟ್ಟ ಸರ್ಕಾರ ಬಡವರನ್ನು ಸುಲಿದು ತಿನ್ನಲು ಹೊರಟಿದೆ, ವಿದ್ಯುತ್ ಬಿಲ್ ಹೆಚ್ಚಳ ಮಾಡಿದೆ, ನಂತರ ನೀರಿನ ಬಿಲ್ ಹೆಚ್ಚಳಕ್ಕೆ ಕೈ ಹಾಕಿದೆ, ಈಗ ಕಸ ನಿರ್ವಹಣೆಗೂ ಶುಲ್ಕ ಹೆಚ್ಚಳ ಮಾಡಿ ಅದನ್ನು ಹಿಂಬಾಗಿಲ ಮೂಲಕ ಜನರನ್ನು ಹೆದರಿಸಿ, ಬೆದರಿಸಿ ಬೆಸ್ಕಾಂ ಮೂಲಕ ಸಂಗ್ರಹಿಸಲು ಹೊರಟಿದೆ. ಈ ಜನ ವಿರೋಧಿ ನಡೆಯನ್ನು ಸಹಿಸುವುದಿಲ್ಲ ಎಂದರು. ಲಾಕ್‌ಡೌನ್‌ನಿಂದ ಜನರ ಆದಾಯ ಶೇ 50ರಷ್ಟು ಕಡಿಮೆ ಆಗಿದೆ ಇಂತಹ ಹೊತ್ತಿನಲ್ಲಿ ಜನರ ಮೇಲೆ ಮತ್ತಷ್ಟು ಹೊರೆ ಹಾಕುವ ನಿರ್ಧಾರ ಬೇಕಿತ್ತೆ ಎಂದು ಪ್ರಶ್ನಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಈಗಾಗಲೇ ಜನರಿಂದ 45 ಕೋಟಿಯಷ್ಟು ಕಸದ ನಿರ್ವಹಣೆಗೆ ಎಂದು ಸೆಸ್ ಸಂಗ್ರಹಿಸಲಾಗುತ್ತಿದೆ. ಬೆಂಗಳೂರಿಗಿಂತಲೂ ದೊಡ್ಡ ವಿಸ್ತೀರ್ಣದ ದೆಹಲಿ ನಗರದ ಕಸ ನಿರ್ವಹಣೆಗೆ ಅಲ್ಲಿನ ಆಮ್ ಆದ್ಮಿ ಪಕ್ಷದ ಸರ್ಕಾರ ವಾರ್ಷಿಕ ₹ 250 ಕೋಟಿ ಖರ್ಚು ಮಾಡುತ್ತಿದೆ. ಆದರೆ ಬಿಬಿಎಂಪಿ ಮಾತ್ರ ವರ್ಷಕ್ಕೆ ₹1200 ಕೋಟಿಗೂ ಅಧಿಕ ವೆಚ್ಚ ಅಂದರೆ ವಾರ್ಡ್ ಒಂದಕ್ಕೆ 6 ಕೋಟಿ ರೂ.ನಷ್ಟು ಖರ್ಚು ಏಕೆ ಎಂದು ಮೊದಲು ಬಿಬಿಎಂಪಿ ಉತ್ತರಿಸಬೇಕು ಎಂದರು. ಈ ತೀರ್ಮಾನದ ಬಗ್ಗೆ ಸಾರ್ವಜನಿಕರಿಂದ‌ ಅಭಿಪ್ರಾಯ ಪಡೆದು ಮುಂದುವರಿಯಬೇಕು ಎಂದು ಆಗ್ರಹಿಸಿದರು‌.

ಕರ್ನಾಟಕ ಉಸ್ತುವಾರಿ ರೋಮಿ ಭಾಟಿ, ಸಹ ಸಂಚಾಲಕ ವಿಜಯ್ ಶರ್ಮ, ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಫಣಿರಾಜ್.ಎಸ್.ವಿ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದ್ ಇದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ