Vijayapatha – ವಿಜಯಪಥ
Saturday, November 2, 2024
NEWSದೇಶ-ವಿದೇಶರಾಜಕೀಯ

ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಪ್ರಯತ್ನ ನಡೆಸಿದೆ: ಸಿದ್ದರಾಮಯ್ಯ ವ್ಯಂಗ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಳೆ ಮತ್ತು ಪ್ರವಾಹದ‌ ನಷ್ಟಕ್ಕೆ ರಾಜ್ಯ ಸರ್ಕಾರ ಇಲ್ಲಿಯ ವರೆಗೆ ನೀಡಿರುವ ಪರಿಹಾರ ಕೇವಲ ರೂ.36.57 ಕೋಟಿ ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ ಸಂತ್ರಸ್ತರಲ್ಲಿ ಯಾರೊಬ್ಬರಿಗೂ ಸೂಕ್ತ ಪರಿಹಾರಧನ ಈ ವರೆಗೆ ತಲುಪಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಕೇಂದ್ರದಿಂದ ಕೇಳಿದರೂ ಸಿಕ್ಕಿರುವುದು ಮಾತ್ರ ರೂ.1,634 ಕೋಟಿ ಮಾತ್ರ. ರಾಜ್ಯ ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶವೂ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ರಾಜ್ಯ ಸರ್ಕಾರ, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.24,941.73 ಕೋಟಿ ಪರಿಹಾರವನ್ನು ಕೇಳಿ ರಾಜ್ಯಕ್ಕೆ ದ್ರೋಹ ಬಗೆದಿದೆ ಎಂದು ಹೇಳಿದ್ದಾರೆ.

ತೆರಿಗೆಯಲ್ಲಿ ಪಾಲು,‌ 15ನೇ ಹಣಕಾಸು ಆಯೋಗದ ಅನುದಾನ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿವರವನ್ನು ರಾಜ್ಯಪಾಲರ ಭಾಷಣದಲ್ಲಿ ನೀಡಿದ್ದರೆ ಸರ್ಕಾರದ ಬಣ್ಣ‌ ಸಂಪೂರ್ಣ ಬಯಲಾಗುತ್ತಿತ್ತು ಎಂದರು.

ಕೊರೊನಾದಂತಹ ಮಾರಕ ರೋಗವನ್ನು ಬ್ರಹ್ಮಾಂಡ ಭ್ರಷ್ಟಚಾರವೆಸಗಲು ದುರುಪಯೋಗ ಪಡಿಸಿಕೊಂಡ ಸರ್ಕಾರ, ರೋಗ ನಿಯಂತ್ರಣದಲ್ಲಿನ ವೈಫಲ್ಯಗಳನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಮರೆಮಾಚಲು ಪ್ರಯತ್ನಿಸಿದೆ ಎಂದು ಕುಟುಕಿದ್ದಾರೆ.

ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು‌‌ ಹಿಂದಿನ ಕಾಂಗ್ರೆಸ್ ಸರ್ಕಾರದ‌ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ ಎಂದು ವ್ಯಂಗ್ಯವಾಡಿದ್ದಾರೆ

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ