NEWSರಾಜಕೀಯ

ಜನರ ಬದುಕು ಬೀದಿಗೆ ಬಿದ್ದರೂ ಕೊಳ್ಳೆ ಹೊಡೆಯುವುದ ನಿಲ್ಲಿಸದ ಸರ್ಕಾರ: ಪೃಥ್ವಿ ರೆಡ್ಡಿ

ಮೌರ್ಯ ವೃತ್ತದಲ್ಲಿ ಎಎಪಿ ನೇತೃತ್ವದಲ್ಲಿ ಆಟೋ ಚಾಲಕರ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ವಿವಿಧ ಕಸುಬುದಾರರಿಗೆ ತಲಾ 5 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಸರ್ಕಾರ ಕೊಟ್ಟ ಮಾತು ತಪ್ಪಿದೆ, ಇನ್ನು 15 ದಿನದ ಒಳಗೆ ಹಣವನ್ನು ಚಾಲಕರ ಖಾತೆಗೆ ಹಾಕದಿದ್ದರೆ ಪ್ರತಿ ಸಂಸದರ ಹಾಗೂ ಶಾಸಕರ, ಸಚಿವರ ಮನೆ ಮುಂದೆ “5 ಸಾವಿರ ಕೊಡಿ” ಎನ್ನುವ ಅಭಿಯಾನ ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಮೌರ್ಯ ವೃತ್ತದಲ್ಲಿ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಆಟೋ ಚಾಲಕರ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ಮಿಶ್ರತಳಿ ಬಿಜೆಪಿ ಸರ್ಕಾರ ಸರಣಿ ಭ್ರಷ್ಟಾಚಾರದ ಮೂಲಕ ಕರ್ನಾಟಕದ ಜನರ ವಿಶ್ವಾಸವನ್ನೇ ಕಳೆದುಕೊಂಡಿದೆ. ಮೂರು ಪಕ್ಷಗಳು ಕರ್ನಾಟಕವನ್ನು ಕೊಳ್ಳೆ ಹೊಡೆದಿವೆ. ಕೊರೊನಾ ನೆಪದಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆದಿದೆ, ಇದನ್ನು ಪ್ರಶ್ನಿಸಬೇಕಾಗಿದ್ದ ವಿರೋಧ ಪಕ್ಷಗಳು ಕೂಡ ಸರ್ಕಾರದ ಜತೆ ಶಾಮೀಲಾಗಿ ಒಂದೂ ಮಾತನ್ನೂ ಆಡದೆ ರಾಜ್ಯದ ಜನರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಮುಖ ಮೂರು ಪಕ್ಷಗಳು ಸಹ ಅಧಿಕಾರದ ರುಚಿಯನ್ನು ಅನುಭವಿಸಿವೆ, ಇದು ಒಳ ಒಪ್ಪಂದ ಅಲ್ಲದೇ ಮತ್ತೇನು ಎಂದು ಪ್ರಶ್ನಿಸಿದರು.

ರಾಜ್ಯದ ಎಲ್ಲಾ ಆಟೋ ಸಂಘಟನೆಗಳು ಇಂದು ಒಂದೇ ವೇದಿಕೆಯಲ್ಲಿ ಬಂದಿವೆ ಇದು ರಾಜ್ಯ ಇತಿಹಾಸದಲ್ಲಿ ಮೊದಲು. ಇಲ್ಲಿ ಯಾವುದೇ ರಾಜಕೀಯವಿಲ್ಲ ನಮಗೆಲ್ಲರಿಗೂ ಇರುವುದು ಒಂದೇ ಉದ್ದೇಶ “ಚಾಲಕರ ಜೀವನ ಮಟ್ಟ ಸುಧಾರಿಸಬೇಕು” ಎನ್ನುವುದು ನಮ್ಮ ಉದ್ದೇಶವಾಗಿರುವುದರಿಂದ ಇಂದು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದಾಗಿದ್ದೇವೆ, ಮುಂದೆ ಒಂದಾಗಿಯೇ ಇರುತ್ತೇವೆ ಎಂದು ಹೇಳಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎನ್ನುವ ಕುಂಟು ನೆಪ ಮಾಡಿಕೊಂಡು ಚಾಲಕರ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ. ಆದರೆ ಪ್ರಭಾವಿ ಶಾಸಕರ ಕ್ಷೇತ್ರಗಳಿಗೆ ಸಾವಿರಾರು ಕೋಟಿ ರೂ. ಕೊಡುಗೆ ನೀಡುತ್ತಿದ್ದಾರೆ. ಇದಕ್ಕೆ ಎಲ್ಲಿಂದ ದುಡ್ಡು ಬರುತ್ತಿದೆ ಈ ಪ್ರಶ್ನೆಗೆ ಉತ್ತರಿಸುವಿರಾ ಯಡಿಯೂರಪ್ಪ ಅವರೇ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ವ್ಯಂಗ್ಯವಾಡಿದರು.

ಪ್ರತಿಭಟನೆಯ ನಂತರ ಸುಮಾರು 413 ಆಟೋಗಳನ್ನು ಸ್ಯಾನಿಟೈಜ್ ಮಾಡಲಾಯಿತು. ಪ್ರತಿಭಟನೆಗೆ ಬಂದಿದ್ದ ಆಟೋ ಚಾಲಕರ ದೇಹದ ಉಷ್ಣತೆ, ಪಲ್ಸ್ ಆಕ್ಸಿ ಮೀಟರ್ ಮೂಲಕ ಆಮ್ಲಜನಕ ಮಟ್ಟ ಪರೀಕ್ಷಿಸಲಾಯಿತು.

ಆಟೋ ಘಟಕದ ಅಧ್ಯಕ್ಷ  ಅಯೂಬ್ ಖಾನ್, ಉಪಾಧ್ಯಕ್ಷ ವೆಂಕಟೇಗೌಡ, ಪೀಸ್ ಆಟೋ ಡ್ರೈವರ್ ಸಂಘಟನೆಯ ರಘು ನಾರಾಯಣ ಗೌಡ,  ಆದರ್ಶ ಆಟೋ ಸಂಘಟನೆಯ ಡಾ.ಸಂಪತ್, ಆಟೋ ಮಿತ್ರ ಪತ್ರಿಕೆಯ ಜಯರಾಂ, ರಾಜೀವ್ ಗಾಂಧಿ ಆಟೋ ಸಂಘಟನೆಯ ಬಿ.ಚಂದ್ರಶೇಖರ್,  ಜಯಕರ್ನಾಟಕ ಸಂಘಟನೆಯ ಆನಂದ್.ಎಚ್, ಕರವೇ ಆಟೋ ಚಾಲಕರ ಸಂಘದ ಗಂಧರ್ವ ರಮೇಶ್, ವಿವಿಧ ಆಟೋ ಚಾಲಕರ ಸಂಘಗಳ ಮುಖಂಡರಾದ ರಾಮಕೃಷ್ಣ, ಸಿ.ಟಿ.ಲೋಕೇಶ್, ನವೀದ್, ಕೆ.ಕೆ.ಚಿಕ್ಕೇಗೌಡ, ಎಜೆ.ಖಾನ್, ಫೈರೋಜ್ ಇದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?