NEWSದೇಶ-ವಿದೇಶನಮ್ಮರಾಜ್ಯರಾಜಕೀಯ

‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತು: ಬಜೆಟ್‌ ವಿರುದ್ಧ ಎಚ್‌ಡಿಕೆ ವ್ಯಂಗ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ. ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್‌, ಪೆಟ್ರೋಲ್‌ ಈಗಾಗಲೇ ಏರುತ್ತಿದೆ. ಅದರ ಜತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಏರಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಒಂದೆಡೆ ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ.ಕೃಷಿ ಸೆಸ್‌ನಿಂದ ಸಂಗ್ರಹವಾಗುವ ಹಣವನ್ನು ಕೃಷಿ ರಂಗದ ಅಭಿವೃದ್ಧಿಗೆ ಬಳಸಲಾಗುತ್ತದೆಯೇ ಎಂಬುದರ ವಿವರಣೆಯೇ ಬಜೆಟ್‌ನಲ್ಲಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

2020-21ರಲ್ಲಿ 9.5% ಮತ್ತು 2022ರಲ್ಲಿ 6.8% ವಿತ್ತೀಯ ಕೊರತೆ ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದು ಒಂದು ಅರ್ಥವ್ಯವಸ್ಥೆಯಲ್ಲಿನ ಭೀಕರ ಪರಿಸ್ಥಿತಿಯೇ ಸರಿ. ಈ ಕೊರತೆಯನ್ನು ಸರ್ಕಾರ ಎಲ್ಲಿಂದ ತುಂಬಿಸಿಕೊಳ್ಳುತ್ತದೆ? ಇದರ ಪರಿಹಾರಕ್ಕಾಗಿ ನೋಟು ಪ್ರಿಂಟು ಮಾಡಲು ಆಗುವುದಿಲ್ಲ. ಕಡೆಗೆ ಅದು ಬ್ಯಾಂಕ್‌ಗಳಿಗೆ ಕೈ ಹಾಕುತ್ತದೆ ಎಂದಿದ್ದಾರೆ.

ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿನ ಸಂಪನ್ಮೂಲವನ್ನು ಅಕ್ಷರಶಃ ದೋಚಲು ಆರಂಭಿಸುತ್ತದೆ. ಇದು ಮತ್ತೊಂದು ಆರ್ಥಿಕ ವಿಷಮ ಪರಿಸ್ಥಿತಿಗೆ ಕಾರಣವಾಗುತ್ತದೆ. ಅದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗುತ್ತದೆ. ಜನರ ಶೋಷಣೆಗೆ ಇದು ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಗಳು ಶೇ. 41ರಷ್ಟು ತೆರಿಗೆ ಪಾಲು ಹೊಂದಿರುವುದಾಗಿಯೂ, ಅದನ್ನು ಕೇಂದ್ರ ಸರ್ಕಾರ ಒಪ್ಪಿರುವುದಾಗಿಯೂ ವಿತ್ತ ಮಂತ್ರಿ ಹೇಳಿದ್ದಾರೆ. ಆದರೆ, ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಈ ವರೆಗೆ ಸರಿಯಾಗಿ ನೀಡಿಲ್ಲ. ಪಾಲನ್ನು ತೋರಿಸುವುದು, ಪಾಲು ನೀಡದೇ ವಂಚಿಸುವುದು ಕೇಂದ್ರ ಪಾಲಿಸಿಕೊಂಡು ಬಂದ ಪರಿಪಾಠವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ ಮುಂದಿನ ವರ್ಷ ₹12 ಲಕ್ಷ ಕೋಟಿ ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ? ಈ ಸಾಲದಿಂದ ಆಗಬಹುದಾದ ಘನವಾದ, ಪ್ರಮುಖವಾದ ಕಾರ್ಯವಾದರೂ ಏನು ಎಂಬುದನ್ನು ಕೇಂದ್ರ ಸರ್ಕಾರ ಹೇಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

Covid ಲಸಿಕೆಗಾಗಿ ₹35 ಸಾವಿರ ಕೋಟಿ ನೀಡುವುದಾಗಿಯೂ, ಬೇಕಿದ್ದರೆ ಇನ್ನಷ್ಟು ನೀಡುವುದಾಗಿಯೂ ಕೇಂದ್ರ ಹೇಳಿದೆ. ಇತರ ದೇಶಗಳಿಗೆ ಲಸಿಕೆ ಕಳುಹಿಸುತ್ತಿರುವುದಾಗಿಯೂ ಹೇಳಿದೆ. ಈ ಎಲ್ಲ ಬಣ್ಣನೆಗಳನ್ನು ಬಿಟ್ಟು ಕೇಂದ್ರ ಸರ್ಕಾರ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ಖಚಿತ ಮಾಡಬೇಕಿತ್ತು. ಆದರೆ, ಸರ್ಕಾರ ಬಣ್ಣನೆಯಲ್ಲಿ ಮಾತು ಮುಗಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

error: Content is protected !!
LATEST
₹35 ಟಿಕೆಟ್‌ ಪಡೆದು ಓವರ್‌ಟ್ರಾವಲ್‌ ಮಾಡಿದ್ದು ಯುವತಿ- ತನಿಖಾ ಸಿಬ್ಬಂದಿ ಮೆಮೋ ಕೊಟ್ಟಿದ್ದು ಮಾತ್ರ ನಿರ್ವಾಹಕರಿಗೆ ಅದೃಷ್ಟ ತಂದುಕೊಟ್ಟ ಕಾರಿಗೆ ಅಂತ್ಯಕ್ರಿಯೆ ನೆರವೇರಿಸಿದ ಸಂಜಯ್ ಪೋಲ್ರಾ ಕುಟುಂಬ BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ