ಬೆಂಗಳೂರು: ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ಇಂದು ಅವರ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಹಾಗೂ ಕೆಂಗಲ್ ಹನುಮಂತಯ್ಯನವರ ಕುಟುಂಬದವರು ಉಪಸ್ಥಿತರಿದ್ದರು.