NEWSನಮ್ಮರಾಜ್ಯರಾಜಕೀಯ

ವೇತನ ತಾರತಮ್ಯ ನಿವಾರಣೆ ಬಗ್ಗೆ ಪ್ರಸ್ತಾಪಿಸದ ಸಾರಿಗೆ ಸಚಿವರು: ಶಿರವಿಲ್ಲದ ಮುಂಡದ ಸ್ಥಿತಿಯ ಭರವಸೆ ನಮಗೆ ಬೇಕಿಲ್ಲ ಎಂದ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿರವಿಲ್ಲದ ಮುಂಡದ ಸ್ಥಿತಿಯ ಭರವಸೆ ನಮಗೆ ಬೇಕಿಲ್ಲ ಎಂದು ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರು ಸಚಿವರಿಗೆ ಹೇಳುತ್ತಿದ್ದಾರೆ.

ನಮಗೆ ನಾಲ್ಕು ವರ್ಷಕ್ಕೆ ಒಂದುಬಾರಿ ಮಾಡುತ್ತಿದ್ದ ಅಗ್ರಿಮೆಂಟ್‌ ಮಾಡಿಕೊಳ್ಳುವ ಅವಧಿ 1ಜನವರಿ 2020ಕ್ಕೆ ಮುಗಿದೆ. ಆದರೂ ಈ ಬಗ್ಗೆ ಸರ್ಕಾರ ಚಕಾರವೆತ್ತಿಲ್ಲ. ಈ ನಡುವೆ ಸರ್ಕಾರಿ ನೌಕರರಾಗಬೇಕು ಎಂಬುದನ್ನು ಒಪ್ಪುತ್ತಿಲ್ಲ. ಹಾಗಾದರೆ ನಾವೇನು ಮಾಡಬೇಕು ಎಂದು ಮುಷ್ಕರ ನಿರತ ನೌಕರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೇರೆ ನಿಗಮಗಳ ನೌಕರರಿಗೆ ಹೋಲಿಸಿಕೊಂಡರು ನಮ್ಮ ಅವರ ವೇತನಲ್ಲಿ ಭಾರಿ ವ್ಯತ್ಯಾಸವಿದೆ. ಹೀಗಾಗಿ ನಮಗೂ ಸರಿಸಮ ವೇತನ ನೀಡಬೇಕು ಎಂಬ ಬೇಡಿಕೆ ಇಟ್ಟಿರುವುದು ತಪ್ಪಾ ಎಂದು ನೌಕರರು ಸರ್ಕಾರವನ್ನು ಕೇಳುತ್ತಿದ್ದಾರೆ.

ಇನ್ನು ನೀವು ಕೊಡುತ್ತಿರುವ ಭರವಸೆಯಲ್ಲಿ ನಮ್ಮ ವೇತನ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡುತ್ತಿಲ್ಲ. ಅದನ್ನು ಬಿಟ್ಟು ಬೇರೆ ಬೇಡಿಕೆಗಳನ್ನು ಈಡೇರುತ್ತೇವೆ ಎಂದು ಹೇಳುತ್ತಿದ್ದೀರಿ. ಇಲ್ಲಿ ಶಿರವನ್ನೇ ಕಡಿದು ಕೈಯಲ್ಲಿ ಹಿಡಿದುಕೊಂಡು ಮುಂಡವನ್ನು ಮುಂದಕ್ಕೆ ಹೋಗು ಎಂದರೆ ಅದು ಸಾಧ್ಯವೆ. ಅಂದರೆ ಶಿರವಿಲ್ಲದ ಮುಂಡದಂತ್ತಾಗಿರುವ ನಮ್ಮ ವೇತನದ ಬಗ್ಗೆ ನೀವು ಒಂದು ನಿರ್ಧಾರಕ್ಕೆ ಬರಬೇಕು ಎಂದು ನೌಕರರು ಸಿಎಂ ಮತ್ತು ಸಾರಿಗೆ ಸಚಿವರಲ್ಲಿ ಮನವಿ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್