Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಬೆಂಗಳೂರಿನ ಕರಾಳ ಭವಿಷ್ಯಕ್ಕೆ ಮುನ್ನಡಿ ಬರೆದ ನೂತನ ಬಿಬಿಎಂಪಿ ಕಾಯ್ದೆ: ಆಪ್‌ ಕಳವಳ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಬಿಬಿಎಂಪಿ ನೂತನ ಕಾಯ್ದೆಗೆ ರಾಜ್ಯಪಾಲರು ಸಹಿ ಹಾಕಬಾರದು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿತ್ತು ಆದರೆ ರಾಜ್ಯಪಾಲರು ಈ ಅವೈಜ್ಞಾನಿಕ ಕಾಯ್ದೆಗೆ ಸಹಿ ಹಾಕಿ ಬೆಂಗಳೂರಿನ ಕರಾಳ ಭವಿಷ್ಯಕ್ಕೆ ಮುನ್ನುಡಿ ಬರೆದಿದ್ದಾರೆ ಎಂದು ಪಕ್ಷದ ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಕಳವಳ ವ್ಯಕ್ತಪಡಿಸಿದರು.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನ ಅಧಿಕಾರವನ್ನು ತನ್ನ ಕೈಯಲ್ಲೆ ಇರಬೇಕು ಎನ್ನುವ ಯಡಿಯೂರಪ್ಪ ಅವರ ರಾಜ್ಯ ಬಿಜೆಪಿ ಸರ್ಕಾರದ ಅತಿಯಾಸೆ, ಹುನ್ನಾರ ಬಯಲಾಗಿದೆ ಎಂದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದ ಜನರಿಗೆ ಒಳ್ಳೆಯದಾಗುತ್ತದೆ. ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪದೇಪದೆ ಹೇಳುತ್ತಿರುವ ಸರ್ಕಾರಕ್ಕೆ ಬೆಂಗಳೂರು ನಗರ ಒಂದೇ ಏಕೆ ಬೇಕು? ಇದು ಒಳ್ಳೆಯ ಕಾಯ್ದೆಯಾಗಿದ್ದರೆ ಇತರೇ ಮಹಾನಗರ ಪಾಲಿಕೆಗಳಿಗೂ ಇದು ಅನ್ವಯವಾಗುವಂತೆ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.

ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಜನರ ಕಷ್ಟಗಳಿಗೆ ಸ್ಪಂದಿಸುವ ಒಬ್ಬನೇ ಒಬ್ಬ ಪ್ರತಿನಿಧಿ ಇಲ್ಲ, ಈ ಕಾಯ್ದೆಯಿಂದ ಇನ್ನು ಮುಂದೆ ಪಾಲಿಕೆ ಸದಸ್ಯರಿಗೆ ಯಾವ ಅಧಿಕಾರವೂ ಇಲ್ಲವಾಗಿದೆ ಎಂದರು.

ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಗೆ ಇದ್ದ ಅಧಿಕಾರ ಕಿತ್ತುಕೊಂಡು ಅಧಿಕಾರ ವಿಕೇಂದ್ರಿಕರಣ ತತ್ವವನ್ನೆ ಗಾಳಿಗೆ ತೂರಿ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರ್ಕಾರ ತನ್ನ ತೆಕ್ಕೆಗೆ ತೆಗೆದುಕೊಂಡು ಪಾಲಿಕೆ ಸದಸ್ಯರನ್ನು ಕೇವಲ ಆಟದ ಗೊಂಬೆಗಳನ್ನಾಗಿ ಇಟ್ಟುಕೊಳ್ಳುವ ತಿದ್ದುಪಡಿ ಇದಾಗಿದೆ ಎಂದರು.

ಪ್ರಸ್ತುತ ಬಿಬಿಎಂಪಿ ಕೈಯಲ್ಲಿ ಇದ್ದ ಅನೇಕ ಅಧಿಕಾರಗಳನ್ನು ಎಲ್ಲಾ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಒಂದೊಂದನ್ನೆ ಕಿತ್ತುಕೊಂಡು ಹಲ್ಲಿಲ್ಲದ ಹಾವಿನಂತೆ ಮಾಡಲಾಗಿದೆ. ನೂತನ ಕಾಯ್ದೆ ಮೂಲಕ ಸಂಪೂರ್ಣವಾಗಿ ಸಾಯಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏನೂ ಉಪಯೋಗವಿಲ್ಲದಂತೆ ಆಗಿರುವ ಬಿಬಿಎಂಪಿಯ ಉಪಯೋಗ ಏನಿದೆ. ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಅಧಿಕಾರ ನಡೆಸಲಿ ಎಂದು ಕಿಡಿಕಾರಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ