NEWSನಮ್ಮಜಿಲ್ಲೆರಾಜಕೀಯ

ನನಗೆ ಮಂಡ್ಯ ಜಿಲ್ಲೆಯ ಜನತೆ ಮೋಸ ಮಾಡಲಿಲ್ಲ: ನಿಖಿಲ್ ಕುಮಾರಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಭಾರತೀನಗರ: ನನಗೆ ಮಂಡ್ಯ ಜಿಲ್ಲೆಯ ಜನತೆ ಮೋಸ ಮಾಡಲಿಲ್ಲ. ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದ್ದೇನೆ ಹೊರತು ಮಂಡ್ಯ ಜಿಲ್ಲೆಯ ಜನತೆಯಿಂದಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಶಾಸಕ ಡಿ.ಸಿ. ತಮ್ಮಣ್ಣ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ-ಮೈಸೂರು ರಾಮನಗರಕ್ಕೆ ಮಾತ್ರ ಜೆಡಿಎಸ್ ಪಕ್ಷ ಸೀಮಿತವಾಗಿಲ್ಲ, ಉತ್ತರ ಕರ್ನಾಟಕ ಭಾಗದಲ್ಲೂ ಪಕ್ಷ ಪ್ರಬಲವಾಗಿ ಬೆಳೆದಿದೆ. 2023ಕ್ಕೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಪ್ರವಾಸ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕುಮಾರಸ್ವಾಮಿ ಅವರುಭಾವನಾತ್ಮಕ ಮನುಷ್ಯ. ಅವರು ಕೇವಲ ಮಂಡ್ಯ ರಾಮನಗರ ಜಿಲ್ಲೆಗಳಿಗೆ ಮಾತ್ರ ಮುಖ್ಯಮಂತ್ರಿ ಎಂದು ವಿರೋಧಿಗಳು ಆರೋಪಿಸಿದ್ದಾರೆ. ಆದರೆ ಅವರು ಎಲ್ಲ ಜಿಲ್ಲೆಗಳಿಗೂ ಅನುದಾನವನ್ನು ಪಕ್ಷಭೇದ ಮರೆತು ನೀಡಿದ್ದಾರೆ. ಮಂಡ್ಯ ಜಿಲ್ಲೆ ಬಗ್ಗೆ ಅಭಿಮಾನ ಸ್ವಲ್ಪ ಹೆಚ್ಚಾಗಿದ್ದುದರಿಂದ ಸ್ವಲ್ಪ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಗೌರವಾಧ್ಯಕ್ಷ ಎಚ್. ಎಂ. ಮರಿ ಮಾದೇಗೌಡ ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ