NEWSನಮ್ಮಜಿಲ್ಲೆ

ಎರಡನೇ ಹಂತದ ನಮ್ಮ ಮೆಟ್ರೋ ಸಂಚಾರಕ್ಕೆ ಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ನಾಳೆಯಿಂದ ಹಸಿರು ಮಾರ್ಗದ ಮೆಟ್ರೋ ರೈಲ್‌ ಸಂಚರಿಸಲಿದೆ.

ಈ ಮೂಲಕ ಹೊಸವರ್ಷದ ಹೊಸ್ತಿಲಲ್ಲೇ ಸಂಕ್ರಾಂತಿ ಹಬ್ಬಕ್ಕೆ ಮೆಟ್ರೋ ಇಲಾಖೆ ರಾಜಧಾನಿಯ ಜನರಿಗೆ ಸಿಹಿ ಸುದ್ದಿ ನೀಡಿದೆ. ಎರಡನೇ ಹಂತದಲ್ಲಿ ನಮ್ಮ ಮೆಟ್ರೋ ಕೈಗೆತ್ತಿಕೊಂಡಿರುವ ಕನಕಪುರ ರಸ್ತೆಯ ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದವರೆಗೂ ವಿಸ್ತರಿತ ಹಸಿರು ಮಾರ್ಗದ ಮೆಟ್ರೋ ರೈಲನ್ನು ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣದಲ್ಲಿ ಉದ್ಘಾಟಿಸಿದರು.

ಯಡಿಯೂರಪ್ಪ ಅವರು 6 ಕಿ.ಮೀ. ಉದ್ದದ ಈ ಮೆಟ್ರೋ ಗ್ರೀನ್ ಲೈನ್ ಉದ್ಘಾಟನೆ ಮಾಡಿದ್ದು, ಈ ವೇಳೆ ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್ ಹಾಗೂ ವಿಶ್ವನಾಥ್, ಕೇಂದ್ರ ಸಚಿವ ಸದಾನಂದ ಗೌಡ ಭಾಗಿಯಾಗಿದ್ದರು.

ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ಸುಮಾರು 500 ಕೋಟಿ ಋೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 6.29 ಕಿಮಿ ಉದ್ದದ ಮೆಟ್ರೋ ಇದಾಗಿದೆ. ಇನ್ನು ಮಾರ್ಗದಲ್ಲಿ ಕೋಣನ ಕೊಂಟೆ ಕ್ರಾಸ್, ಕೃಷ್ಣ ಲೀಲಾ ಪಾರ್ಕ್, ವಾಜರಹಳ್ಳಿ, ತಲಗಟ್ಟಪುರ, ಅಂಜನಪುರ ಟೌನ್ ಶಿಪ್ ಎಂಬ ಐದು ಎಲಿವೇಟೆಡ್ ನಿಲ್ದಾಣ ನಿರ್ಮಾಣ ಮಾಡಲಾಗಿದ್ದು, ಉದ್ಘಾಟನೆಗೊಂಡ ಒಂದು ದಿನದ ಬಳಿಕ ಅಂದರೆ ಜನವರಿ 15 ರಿಂದ ಜನ ಬಳಕೆಗೆ ಲಭ್ಯವಾಗಲಿದೆ. ಟ್ರಾಫಿಕ್ ಕಿರಿಕಿರಿಯಿಂದ ಬಳಲುತ್ತಿದ್ದ ಜನರಿಗೆ ಇದೀಗ ಸಂತೋಷದ ಸುದ್ದಿ ಸಿಕ್ಕಿದೆ.

ಕೆಲವು ತಿಂಗಳಿನಿಂದ ಈ ಮಾರ್ಗದ ಸಿವಿಲ್ ಕಾಮಗಾರಿ, ಹಳಿ ಜೋಡಣೆ ಕಾರ್ಯ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯ ಕಂಡಿದೆ. ಇದರ ಜತೆಗೆ ಆಕರ್ಷಣೀಯವಾಗಿ ಒಳಾಂಗಣ ವಿನ್ಯಾಸ ಮಾಡಲಾಗಿದೆ. ಸದ್ಯಕ್ಕೆ ರೂಪಿಸಲಾಗಿರುವ ಸಾಮಾನ್ಯ ದರವನ್ನೇ ಪ್ರಯಾಣಿಕರು ಈ ಮಾರ್ಗದಲ್ಲೂ ಭರಿಸಬೇಕಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ