CrimeNEWSನಮ್ಮಜಿಲ್ಲೆ

ಜನ್ಮನೀಡಿದ ಕೆಲವೇ ನಿಮಿಷಗಳಲ್ಲಿ ಮಗುವನ್ನು ಹತ್ಯೆಗೈದ ಪಾಪಿ ತಾಯಿ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಪಾಪಿ ತಾಯಿಯೊಬ್ಬಳು ತಾನೆ ಹೆತ್ತ ನವಜಾತ ಶಿಶುವನ್ನು ಮೊಬೈಲ್‌ ಇಯರ್‌ ಫೋನ್‌ ವೈಯರ್ ನಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದೆ.

2020 ರ ಡಿಸೆಂಬರ್ 15 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕ್ರೂರ ತಾಯಿಯನ್ನು ಶಾಹೀನಾ ಎಂದು ಗುರುತಿಸಲಾಗಿದ್ದು, ಈ ಸಂಬಂಧ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಾಹೀನಾ ಮಗುವಿಗೆ ಜನ್ಮ ನೀಡಿದ ಕೂಡಲೇ ಹತ್ಯೆ ಮಾಡಿದ್ದು, ತೀವ್ರ ರಕ್ತಸ್ರಾವವಾದ್ದರಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಸ್ಪಷ್ಟಪಡಿಸಿದ್ದರು. ಇದರಿಂದ ಗಾಬರಿಗೊಂಡ ಆಕೆಯ ತಾಯಿ ಮನೆಯವರು ಕೂಡಲೇ ಮನೆಗೆ ಬಂದು ಹುಡುಕಾಡಿದಾಗ ಮಂಚದ ಕೆಳಗೆ ಬಟ್ಟೆಯಿಂದ ಸುತ್ತಿದ ರೀತಿಯಲ್ಲಿ ಮಗುವಿನ ದೇಹ ಪತ್ತೆಯಾಗಿದೆ.

ಈ ಸಂಬಂಧ ಆರೋಪಿ ಶಾಹೀನಾಳನ್ನು ತನಿಖೆ ನಡೆಸಿದಾಗ ಆಕೆ ತಾನು ಮಗುವನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಮೊದಲ ಮಗುವಾದ ಕೂಡಲೇ ಮತ್ತೆ ಗರ್ಭಿಣಿಯಾಗಿದ್ದರಿಂದ ಬೇಸರಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ.

ಈಕೆ ಗರ್ಭಿಣಿಯಾಗಿರುವ ವಿಷಯ ಆಕೆಯ ಪತಿ ಕುಟುಂಬದವರಿಗೆ ತಿಳಿದಿರಲಿಲ್ಲ. ಇತ್ತ ಮಗುವಿನ ಮೃತದೇಹವನ್ನು ಕಣ್ಣೂರಿನ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿತ್ತು. ವರದಿಯಲ್ಲಿ ಮಗುವನ್ನು ದಪ್ಪವಾದ ಕೇಬಲ್ ನಿಂದ ಬಿಗಿದು ಕೊಲೆ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತೆ ತಾಯಿಯನ್ನು ವಿಚಾರಣೆ ನಡೆಸಿದಾಗ ಆಕೆ ಮೊಬೈಲ್ ಇಯರ್ ಫೋನ್ ವೈರ್ ಬಳಸಿ ಹತ್ಯೆ ಮಾಡಿರುವುದಾಗಿ ಬಾಯಿಬಿಟ್ಟಿದ್ದಾಳೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...