NEWSನಮ್ಮಜಿಲ್ಲೆರಾಜಕೀಯ

ಆರ್‌ಆರ್‌ ನಗರ ಕ್ಷೇತ್ರ: ಮೈತ್ರಿ ಪ್ರಶ್ನೆಯೇ ಇಲ್ಲ ಜೆಡಿಎಸ್‌ ಅಭ್ಯರ್ಥಿ ಕಣಕ್ಕೆ- ಎಚ್‌ಡಿಕೆ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನವೆಂಬರ್‌ 3ರಂದು ಆರ್‌. ಆರ್‌. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯನ್ನು ಜೆಡಿಎಸ್‌ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸ್ವತಂತ್ರವಾಗಿ ಸ್ಪರ್ಧೆಗಿಳಿಯಲಿದೆ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಉಪ ಸಮರಕ್ಕಾಗಿ ಎಲ್ಲ ಪಕ್ಷಗಳೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಆರ್​.ಆರ್​. ನಗರ ಉಪ ಚುನಾವಣೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಸುದ್ದಿ ಹರಿದಾಡಿತ್ತು.   ಅದಕ್ಕೆ ಪ್ರತಿಕ್ರಿಯೆ ನೀಡಿರುವ  ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ.     ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸ್ಪಷ್ಟನೆ ನೀಡಿದರು.

ಆರ್​.ಆರ್​. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್​ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆರ್​.ಆರ್​. ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧವಾಗಿದೆ.  ನಾವು ಕೂಡ ಮಾನಸಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಎಚ್​ಡಿಕೆ ತಿಳಿಸಿದರು.

ಸಚಿವ ಕೆ.ಎಸ್. ಈಶ್ವರಪ್ಪ ಟೀಕೆ
ಈ ಎರಡೂ ಉಪಚುನಾವಣೆಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಂದು ಕಡೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಡಿದಾಡುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ನಮ್ಮದೂ ಒಂದು ಪಕ್ಷ ಇದೆ ಎನ್ನುತ್ತಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಸರ್ಕಾರ ಹಾಗೂ ಸಿಎಂ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರೆಲ್ಲ ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿರುವ ಅವರು,  ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನು ಬಿಜೆಪಿಯೇ ಗೆದ್ದಿದೆ. ಕಾಂಗ್ರೆಸ್​ನವರಿಗೇ ಈ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಭರವಸೆಯಿಲ್ಲ.  ಇನ್ನು ಜೆಡಿಎಸ್​ ಕೇಳಬೇಕೆ ಎಂದು ಈಶ್ವರಪ್ಪ ಎರಡೂ ಪಕ್ಷಗಳನ್ನು ಟೀಕಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ