Friday, November 1, 2024
NEWSನಮ್ಮರಾಜ್ಯರಾಜಕೀಯ

ಇದು ಅಕ್ರಮ ಗಳಿಕೆಯ ಹಣ,ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕ ಗೆಲುವು: ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ ದಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು ಎಂದು ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ ಎಂದಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...