ತಿ.ನರಸೀಪುರ: ಕೊರೊನಾ ಸೋಂಕಿತ ವ್ಯಕ್ತಿ ಸಹೋದರ ಗ್ರಾಮ ಸೇವಕ ತಾಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸಿದ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯ ಎಲ್ಲ ವಿಭಾಗಗಳನ್ನು ಒಂದು ದಿನಕ್ಕೆ ಸೀಲ್‌ಡೌನ್ ಮಾಡಲಾಗಿದೆ.
ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಸೊಕಿಂತನ ಜತೆ ಸಂಪರ್ಕ ಹೊಂದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಸೋಂಕಿತನ ಜತೆ ಪ್ರಥಮ ಸಂಪರ್ಕಹೊಂದಿದ್ದ ಈ ನೌಕರನನ್ನು ಈಗಾಗಲೇ ಕ್ವಾರಂಟೈನ್ ಮಾಡಲಾಗಿದ್ದು, ಆತನ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಕಚೇರಿಯನ್ನು ಸಂಪೂರಣವಾಗಿ ಸ್ಯಾನಿಟೈಜ್ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ದಿನ ತಾಲೂಕು ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಕಚೇರಿಗೆ ಸ್ಯಾನಿಟೈಸ್ ಮಾಡಿ ಬಳಿಕ ಎಷ್ಟು ದಿನ ಸೀಲ್‌ಡೌನ್ ಮಾಡಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ತಹಸೀಲ್ದಾರ್ ನಾಗೇಶ್ ಮಾಹಿತಿ ನೀಡಿದ್ದಾರೆ.