NEWSನಮ್ಮರಾಜ್ಯ

ಇಂದು ವರ್ಷದ ಕೊನೆಯ ಚಂದ್ರ ಗ್ರಹಣ, ಕಾರ್ತಿಕ ಹುಣ್ಣಿಮೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.

ಭಾರತ ದೇಶದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರಿಸಲಿದೆ.

ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಗ್ರಹಣ ಗೋಚರವಾಗುವುದಿಲ್ಲ. ಪಾಕಿಸ್ತಾನ, ಇರಾನ್, ಇರಾಕ್, ಅಫ್ಘಾನಿಸ್ತಾನ, ಅಮೆರಿಕ, ಇಂಗ್ಲೆಂಡ್, ಐರ್ಲೆಂಡ್, ನಾರ್ವೇ, ಸ್ವೀಡನ್, ಫಿನ್‍ಲ್ಯಾಂಡ್‍ನಲ್ಲಿ ಗೋಚರಿಸಲಿದೆ.

ಯಾವ ಸಮಯದಲ್ಲಿ ಏನು?
ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 1 ಗಂಟೆ 4 ನಿಮಿಷ
ಗ್ರಹಣ ಮಧ್ಯಕಾಲ – ಮಧ್ಯಾಹ್ನ 3 ಗಂಟೆ 13 ನಿಮಿಷ
ಗ್ರಹಣ ಮೋಕ್ಷಕಾಲ – ಸಂಜೆ 5 ಗಂಟೆ 22 ನಿಮಿಷ
ಚಂದ್ರ ಗ್ರಹಣದ ಅವಧಿ – 4 ಗಂಟೆ 21 ನಿಮಿಷ

ಈ ದಿನ ಚಂದ್ರಗ್ರಹಣ ಸಂಪೂರ್ಣ ಗ್ರಹಣವಲ್ಲ. ಹೀಗಾಗಿ ಈ ಗ್ರಹಣವನ್ನು ಋಣಾತ್ಮಕ ಎಂದು ಪರಿಗಣಿಸುವುದಿಲ್ಲ. ಹೀಗಾಗಿ, ಯಾವುದೇ ದೇಗುಲಗಳನ್ನು ಮುಚ್ಚುವುದಿಲ್ಲ. ಎಂದಿನಂತೆ ಧಾರ್ಮಿಕ ಕಾರ್ಯಗಳು ನಡೆಯುತ್ತವೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ