NEWSನಮ್ಮರಾಜ್ಯರಾಜಕೀಯ

ನಾಳೆ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ

6 ತಾಲೂಕಿನ 126 ಗ್ರಾ.ಪಂ.ಗಳಲ್ಲಿ ಮತದಾನ, 997 ಮತಗಟ್ಟೆ, 5490 ಸಿಬ್ಬಂದಿ ನಿಯೋಜನೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಕಲಬುರಗಿ: ಗ್ರಾಮ ಪಂಚಾಯಿತಿಯ ಮೊದಲನೇ ಹಂತದ ಚುನಾವಣೆಯ ಮತದಾನವು ಮಂಗಳವಾರ ಬೆಳಗ್ಗೆ 7 ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದೆ. ಇದಕ್ಕಾಗಿ ಒಟ್ಟು 997 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ ಕಲಬುರಗಿ ತಾಲೂಕಿನ 28, ಆಳಂದ ತಾಲೂಕಿನ 36, ಅಫಜಲಪೂರ ತಾಲೂಕಿನ 28, ಕಮಲಾಪೂರ ತಾಲೂಕಿನ 16, ಕಾಳಗಿ ತಾಲೂಕಿನ 14 ಹಾಗೂ ಶಹಾಬಾದ ತಾಲೂಕಿನ 4 ಗ್ರಾಮ ಪಂಚಾಯತಿಗಳು ಸೇರಿದಂತೆ ಒಟ್ಟು 126 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗಾಗಿ 140 ಚುನಾವಣಾಧಿಕಾರಿಗಳು, 140 ಸಹಾಯಕ ಚುನಾವಣಾಧಿಕಾರಿಗಳು ಸೇರಿದಂತ ಒಟ್ಟು 5490 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈ ಚುನಾವಣೆಗಾಗಿ 805 ಮೂಲ ಮತಗಟ್ಟೆ, 192 ಆಕ್ಸಲರಿ ಮತಗಟ್ಟೆ ಸೇರಿದಂತೆ ಒಟ್ಟು 997 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

31-08-2020ರ ಅರ್ಹ ಮತದಾರರ ಪಟ್ಟಿಯಂತೆ ಈ ಚುನಾವಣೆಯಲ್ಲಿ 3,69,935 ಪುರುಷರು, 3,47,635 ಮಹಿಳೆಯರು ಹಾಗೂ 64 ಇತರೆ ಮತದಾರರು ಒಳಗೊಂಡಂತೆ ಒಟ್ಟು 7,17,634 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

ಕಲಬುರಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ ಹಾಗೂ ಶಹಾಬಾದ ತಾಲೂಕುಗಳ ಒಟ್ಟು 126 ಗ್ರಾಮ ಪಂಚಾಯತಿಗಳ ಒಟ್ಟು 2220 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿತ್ತು. ಆದರೆ 1480 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆದಿದ್ದು ಹಾಗೂ 141 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಒಟ್ಟು 2079 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 5876 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಕೋವಿಡ್-19 ಸುರಕ್ಷತಾ ಕ್ರಮ
ಕೋವಿಡ್-19 ಹಿನ್ನೆಲೆಯಲ್ಲಿ ಮತದಾನಕ್ಕಾಗಿ ಮತ ಕೇಂದ್ರಕ್ಕೆ ಆಗಮಿಸುವ ಎಲ್ಲಾ ಮತದಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸಬೇಕು ಮತ್ತು ಮಾಸ್ಕ್ ಧರಿಸಬೇಕು. ಮತಗಟ್ಟೆಯಲ್ಲಿ ಮತದಾರರು ಸಾಮಾಜಿಕ ಅಂತರ ಕಾಪಾಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್