Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳದ ವಿರುದ್ಧ ನಾಳೆ ಆಪ್‌ನಿಂದ ಬೃಹತ್ ಪ್ರತಿಭಟನೆ

ನಾಳೆ 11 ಗಂಟೆಗೆ ಮೌರ್ಯ ವೃತ್ತದಲ್ಲಿ ಆಮ್ ಆದ್ಮಿ ಪಕ್ಷ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಡಿಸೆಂಬರ್ ತಿಂಗಳೊಂದರಲ್ಲೇ ಎರಡು ಬಾರಿ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಿ ಜನರ ಸುಲಿಗೆ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಾಳೆ (ಶನಿವಾರ 26) ಬೆಳಗ್ಗೆ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದಿಂದ ನಗರದ ಮೌರ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಮಾಹಿತಿ ನೀಡಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಾಕ್‌ಡೌನ್ ನೆಪ ಮಾಡಿಕೊಂಡು ಸಬ್ಸಿಡಿ ನೀಡುವುದನ್ನು ನಿಲ್ಲಿಸಿರುವ ಸರ್ಕಾರ ನೇರವಾಗಿ 20 ಸಾವಿರ ಕೋಟಿ ರೂ. ಉಳಿತಾಯ ಮಾಡಿದೆ ಆದರೂ ಬೆಲೆ ಹೆಚ್ಚಳ ಏಕೆ, ಅಗ್ಗವಾಗಿ ಸಿಗುವ ಸೌದೆಗಾದರೂ ಸಬ್ಸಿಡಿ ಕೊಡು ಗುರು ಎಂದು ವ್ಯಂಗ್ಯವಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಒಲೆಯಲ್ಲಿ ಅಡುಗೆ ಮಾಡುವುದರಿಂದ ಪರಿಸರ ಮಾಲಿನ್ಯ ತಪ್ಪಿಸಬಹುದು ಎಂದು ಹೇಳಿ ಗ್ಯಾಸ್ ವಿತರಿಸಿದ ಮೋದಿಯವರು ಈಗ ಬಡವರನ್ನು ಸುಲಿಗೆ ಮಾಡುತ್ತಿದ್ದಾರೆ. ಆದ ಕಾರಣ ನಾಳೆ ಸೌದೆ ಒಲೆಯಲ್ಲಿ ಪಕೋಡ, ಟೀ ತಯಾರಿಸಿ ಮಾರಾಟ ಮಾಡಲಾಗುತ್ತದೆ, ಈ ಹಣವನ್ನು ಜನರಿಗೆ ಸಬ್ಸಿಡಿ ನೀಡಿ ಎಂದು ನೀಡಲಾಗುತ್ತದೆ ಎಂದು ಪ್ರತಿಭನೆಯ ಸ್ವರೂಪ ತಿಳಿಸಿದರು.

ಕೇಂದ್ರ ಬಿಜೆಪಿ ಸರ್ಕಾರದ ಧೋರಣೆ ಏನು ಎಂಬುದೇ ಅರ್ಥವಾಗುತ್ತಿಲ್ಲ, ಈ ದೇಶವನ್ನು ಸೂಪರ್ ಪವರ್ ಮಾಡುತ್ತೇವೆ ಎಂದು ಹೇಳುತ್ತಲೇ ಬಿಕಾರಿಗಳನ್ನಾಗಿ ಮಾಡುತ್ತಿದೆ, ಕಿಂಚಿತ್ತೂ ದೇಶ ಭಕ್ತಿ ಇಲ್ಲದ ಜನರಿಂದ ಪ್ರಗತಿ ನಿರೀಕ್ಷಿಸಲು ಸಾಧ್ಯವೇ ಎಂದರು.

ಬೆಂಗಳೂರು ಯುವ ಘಟಕದ ಉಪಾಧ್ಯಕ್ಷೆ ಸಿಂಧು ರಾವ್ ಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ