Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ನಾಳೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ವಿಧಾನಸೌಧ ಚಲೋ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ, ಸಾರಿಗೆ ನೌಕರರ ಒಕ್ಕೂಟ, ವಿವಿಧ ರೈತಪರ, ಕನ್ನಡಪರ ಮತ್ತು ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ, ಡಿ10ರಂದು ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಕಾಲ್ನಡಿಗೆ ಮೂಲಕ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೊಸಪೇಟೆ ವಿಭಾಗದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಜ್ದೂರೆ ಸಂಘ, ಸಾರಿಗೆ ನೌಕರರು ಸರ್ಕಾರಿ ನೌಕರರಾಗುವ ಹೋರಾಟದ ಒಕ್ಕೂಟ ವಿವಿಧ ಮಠಾಧೀಶರು, ಗಣ್ಯರ ನೇತೃತ್ವದಲ್ಲಿ ಈ ವಿಧಾನಸೌಧ ಚಲೋ ಆಯೋಜಿಸಿದ್ದು ತಮ್ಮ ಬೇಡಿಕೆ ಈಡೇರುವವರೆಗೆ ನಿರಂತರ ಹೋರಾಟ ನಡೆಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ ಎಂದು ಸಾರಿಗೆ ನೌಕರರ ಸಂಘದ ಪ್ರಮುಖರಾದ ಸುಧಾಕರ್‌ ರೆಡ್ಡಿ ತಿಳಿಸಿದ್ದಾರೆ.

ವಿಧಾನಸೌಧ ಚಲೋ ಅಂದು ಬೆಳಗ್ಗೆ 10ಗಂಟೆಗೆ ಆರಂಭವಾಗಲಿದ್ದು, ಹೋರಾಟದಲ್ಲಿ 10ರಿಂದ 15 ಸಾವಿರ ನೌಕರರು, ನೌಕರರ ಕುಟುಂಬದ ಸದಸ್ಯರ ಜತೆಗೆ ಸ್ಫಟಿಕಪುರಿ ಮಠಾಧೀಶರಾದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಸೇರಿ ಹಲವು ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿಜಯಪಥ (ಡಿಜಿಟಲ್‌ ಮೀಡಿಯಾ)ಕ್ಕೆ ತಿಳಿಸಿದರು.

ಸಾರಿಗೆ ನೌಕರರನ್ನು ಸರ್ಕಾರ ಕರ್ತವ್ಯದ ಹೊಣೆಯ ಸಂಕೋಲೆಯಿಂದ ಕಟ್ಟಿಹಾಕಿದ್ದು, ತಮ್ಮ ಈ ಹೋರಾಟದಲ್ಲಿ ಪಾಲ್ಗೊಳ್ಳಲು ಬಹುತೇಕ ಸಿಬ್ಬಂದಿಗೆ ಆಗಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ನೌಕರರ ಕುಟುಂಬದ ಸದಸ್ಯರು ಹಾಗೂ ಸಮಾನ ಮನಸ್ಕ ಹೋರಾಟಗಾರರು ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಈ ಹೊರಾಟ ಬೆಂಬಲಿಸಲು ನಮ್ಮೊಂದಿಗೆ ಪಾಲ್ಗೊಳ್ಳವ ಮೂಲಕ ಹೋರಾಟವನ್ನು ಯಶಸ್ವಿಗೊಳಿಸುವಂತೆ, ವಿವಿಧ ಸಾರಿಗೆ ನೌಕರರ ಸಂಘಟನೆಗಳು ಹಾಗೂ ಸಾರಿಗೆ ನೌಕರರ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.

ಸಾರಿಗೆ ನೌಕರರಿಗೆ ಕೇಂದ್ರ ಕಚೇರಿಯ ಸೂಚನೆ

 

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ