ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಿಗಮದಲ್ಲಿ ಹಲವಾರು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ಪೈಕಿ 28 ಅಧಿಕಾರಿಗಳನ್ನು ಜುಲೈ 26ರಂದು ವರ್ಗಾವಣೆ ಮಾಡಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಇದೇ ಜುಲೈ 4ರಂದು ನಿಮ್ಮ ನೆಚ್ಚಿನ ವಿಜಯಪಥ ಆನ್‌ಲೈನ್ ಪತ್ರಿಕೆ ಹಲವಾರು ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟುಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳ ವರ್ಗಾವಣೆ ಏಕೆ ಆಗಿಲ್ಲ ಎಂಬ ಬಗ್ಗೆ ಹೈ ಕೋರ್ಟ್‌ನಲ್ಲಿ ರಿಟ್ ಅರ್ಜಿ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ವರದಿ ಪ್ರಕಟಿಸಿತು.
ಕರ್ನಾಟಕ ಹೈ ಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಅವರು, ಈ ಬಗ್ಗೆ ನಮ್ಮ ವಕೀಲರ ತಂಡ ಸದ್ದಿಲ್ಲದೆ ರಿಟ್ ಅರ್ಜಿ ಸಲ್ಲಿಸುವ ಸಿದ್ಧತೆಯಲ್ಲಿ ತೊಡಗಿದ್ದು, ಈಗ ಸಾರಿಗೆಯ KSRTC, BMTC, NWKRTC ಮತ್ತು NEKRTC ಸಂಸ್ಥೆಗಳಲ್ಲಿ ಹತ್ತಾರು ವರ್ಷದಿಂದ ಒಂದೇ ಕಡೆ ಬೇರು ಬಿಟ್ಟಿರುವ ಅಧಿಕಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ ಎಂದು ವರದಿ ಬಿತ್ತರಿಸಲಾಗಿತ್ತು.
ಈ ವರದಿಯಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ನಾಲ್ಕೂ ಸಾರಿಗೆ ನಿಗಮಗಳ ಪೈಕಿ ಈ ಹಿಂದೆ ಅಂದರೆ ಜುಲೈ 14ರಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ನಿಗಮದ 19 ಅಧಿಕಾರಿಗಳನ್ನು ವಿವಿಧೆಡೆಗೆ ವರ್ಗಾವಣೆ ಮಾಡಿ ಇಲಾಖೆಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದರು.
ನಿನ್ನೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಿಗಮದ 28 ವಿವಿಧ ವಿಭಾಗದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಆ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ….