NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಾರಿಗೆ ನೌಕರರ ಸಮರ- ಸರ್ಕಾರ ಎಸ್ಮಾ ಜಾರಿ ಮಾಡಿದರೆ ನಾವು ಬಗ್ಗಲ್ಲ: ಕೋಡಿಹಳ್ಳಿ ಚಂದ್ರಶೇಖರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ, 1.30 ಲಕ್ಷ ನೌಕರರು ಮತ್ತು ಅವರ ಕುಟುಂಬದವರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಐದು ವರ್ಕ್ಕೊಮ್ಮೆ ಯಾರಿಗೂ ಭಡ್ತಿ ನೀಡುತ್ತಿಲ್ಲ. ಅಷ್ಟೇ ಏಕೆ 20-25 ವರ್ಷ ಸೇವೆ ಸಲ್ಲಿಸಿರುವವರಿಗೆ ಇದುವರೆಗೂ ಐಾವುದೋ ಒಂದು ಕಾರಣವೇಳೆ ಭಡ್ತಿ ನೀಡದೆ ಕಡೆಗಣಿಸಲಾಗುತ್ತಿದೆ. ಸಾರಿಗೆ ನೌಕರರಿಗೆ ಅರ್ಧ ಕೂಲಿ ಕೊಟ್ಟು ಜೀತ ಮಾಡಿಸಲಾಗುತ್ತಿದೆ. ಸ್ವಲ್ಪ ತೊಂದರೆಯಾದರೂ, ನೌಕರರ ಮೇಲೆ ಕಾನೂನಿನ ಅಸ್ತ್ರ ಬಳಸಿ, ವೇತನ ಕಡಿತ ಮಾಡಲಾಗುತ್ತಿದೆ. ಕೊಡೊಬಾರದ ಹಿಂಸೆಯನ್ನೆಲ್ಲಾ ಕೊಡುತ್ತಿದ್ದಾರೆ.

ಪ್ರಯಾಣಿಕ ಟಿಕೆಟ್‌ ತೆಗೆದುಕೊಂಡಿಲ್ಲ ಎಂದರೆ ಅದನ್ನು ನಿರ್ವಾಹಕರ ಮೇಲೆ ಹಾಕುತ್ತಿದ್ದಾರೆ. ಆದರೂ ಇವೆಲ್ಲವನ್ನೂ ಸಹಿಸಿಕೊಂಡು ನೌಕರರು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಅವರು ನ್ಯಾಯ ಕೇಳಿದರೆ ಈ ರೀತಿಯ ನಡವಳಿಕೆಯನ್ನು ಸರ್ಕಾರ ತೋರಿಸುತ್ತಿದೆ, ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಗರಿಕರು ನೌಕರರ ಪರವಾಗಿ ನಿಲ್ಲಬೇಕು. ನೌಕರರ ಕಷ್ಟವನ್ನು ಅರ್ಥಮಾಡಿಕೊಳ್ಳಬೇಕು. ನಿಮಗೆ ಸ್ವಲ್ಪ ಅನಾನುಕೂಲವಾಗಿರಬಹುದು, ಅದಕ್ಕಾಗಿ ತಾವು ನಿಮ್ಮಲ್ಲಿ ಕ್ಷಮೆ ಕೇಳುತ್ತಿದ್ದೇವೆ. ಅರ್ಧ ಸಂಬಳಕ್ಕೆ ದುಡಿಯುವ ನೌಕರರ ಮೇಲೆ ನಾಗರಿಕರು ಸಿಟ್ಟು ಮಾಡಿಕೊಳ್ಳಬಾರದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಂದು ಮನವಿ ಮಾಡಿದರು.

ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ
ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾಗಿರುವ ಬಗ್ಗೆ ವಿಪಕ್ಷಗಳ ಕುತಂತ್ರ ಮತ್ತು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಸಚಿವ ಲಕ್ಷ್ಮಣ್ ಸವದಿ ಹೇಳಿಕೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್, ತಾಕತ್ತಿದ್ದರೆ ಇವತ್ತೆ ದಾಖಲೆ ಬಿಡುಗಡೆ ಮಾಡಿ ಎಂದು ಸವದಿಗೆ ಸವಾಲು ಹಾಕಿದರು. ಅಂತೆಯೇ ಪ್ರತಿಭಟನಾ ನೌಕರರನ್ನು ಹತ್ತಿಕಲು ಈ ರೀತಿ ಆರೋಪ ಮಾಡಿದ್ದು, ಸಿಬ್ಬಂದಿ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಇನ್ನು ನೌಕರರಿಗೆ ನೀಡುತ್ತಿರುವ ಸಹಿಸಲಾಗದ ಕಿರುಕುಳವನ್ನು ಮೊದಲು ತಪ್ಪಿಸಬೇಕು. ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯವನ್ನು ನಮಗೂ ನೀಡಬೇಕು ಎಂಬುವುದು ಸಾರಿಗೆ ನೌಕರರ ಒತ್ತಾಯವಾಗಿದೆ. ಅದನ್ನು ಬಿಟ್ಟು ಸರ್ಕಾರ ಮೊಂಡುತನವನ್ನು ಪ್ರದರ್ಶಿಸುತ್ತಿದೆ ಎಂದು ಇದಕ್ಕೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್