NEWSನಮ್ಮರಾಜ್ಯರಾಜಕೀಯ

ಕೊಲಂಬೋ ಯಾತ್ರೆ ಮಾಡಿದ್ದು ನಿಜ: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕದ್ದು ಮುಚ್ಚಿ ‘ಕೊಲಂಬೋ ಯಾತ್ರೆ’ ಮಾಡುವ ದುರಭ್ಯಾಸಗಳು ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ‘ಕೊಲಂಬೋ ಯಾತ್ರೆ’ ಮಾಡಿರಲಿಲ್ಲ ವಿರೋಧಿಗೆ ತಕ್ಕ ಉತ್ತರ ನೀಡಿದ್ದಾರೆ.

ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು ತಿವಿದಿದ್ದು ಅವರಿಗೆ ಏಕೆ ಪ್ರವಾಸ ಮಾಡಿದ್ದೆವು ಎಂಬುದನ್ನು ಏಕೆ ಹೇಳಿಲ್ಲ ಎಂದು ಜಾಡಿಸಿದ್ದಾರೆ.

2014 ರ ಜೂನ್ ನಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದು ತಿಳಿಸಿದ್ದಾರೆ.

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್‌ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸ್‌ ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

error: Content is protected !!
LATEST
8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ... ₹35 ಟಿಕೆಟ್‌ ಪಡೆದು ಓವರ್‌ಟ್ರಾವಲ್‌ ಮಾಡಿದ್ದು ಯುವತಿ- ತನಿಖಾ ಸಿಬ್ಬಂದಿ ಮೆಮೋ ಕೊಟ್ಟಿದ್ದು ಮಾತ್ರ ನಿರ್ವಾಹಕರಿಗೆ ಅದೃಷ್ಟ ತಂದುಕೊಟ್ಟ ಕಾರಿಗೆ ಅಂತ್ಯಕ್ರಿಯೆ ನೆರವೇರಿಸಿದ ಸಂಜಯ್ ಪೋಲ್ರಾ ಕುಟುಂಬ BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ!