NEWSದೇಶ-ವಿದೇಶರಾಜಕೀಯ

ಟ್ರಂಪ್ – ಬಿಜೆಪಿ ಬೆಂಬಲಿಗರಿಗೆ ಹೆಚ್ಚೇನು ವ್ಯತ್ಯಾಸವಿಲ್ಲ : ದೀದಿ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತಾ: ಚುನಾವಣಾ ಸೋಲನ್ನು ಒಪ್ಪದೆ ಅಮೆರಿಕ ಸಂಸತ್​ ಭವನದ ಮೇಲೆ ದಾಳಿ ನಡೆಸಿರುವ ಡೊನಾಲ್ಡ್​ ಟ್ರಂಪ್ ಹಾಗೂ ಬಿಜೆಪಿ ಬೆಂಬಲಿಗರಿಗೆ ಹೆಚ್ಚೇನು ವ್ಯತ್ಯಾಸ ಇಲ್ಲ. ಭವಿಷ್ಯದಲ್ಲಿ ಯಾವಾಗ ಬಿಜೆಪಿ ಸೋಲುತ್ತದೆಯೋ ಅಂದು ’ನಾವು ಗೆದ್ದಿದ್ದೇವೆ, ನಾವು ಗೆದ್ದಿದ್ದೇವೆ’ ಎಂದು ಬಿಜೆಪಿ ಬೆಂಬಲಿಗರೂ ಇದೇ ರೀತಿ ಹೇಳುತ್ತಾ, ಅಂತಹದ್ದೇ ವರ್ತನೆ ತೋರುತ್ತಾರೆ. ಇದರಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಟಿಎಂಸಿ ಪಕ್ಷ ನಿನ್ನೆ ನಾಡಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ರ್‍ಯಾಲಿಯನ್ನು ಆಯೋಜಿಸಿತ್ತು. ಈ ರ್‍ಯಾಲಿಯಲ್ಲಿ ಮಾತನಾಡಿರುವ ದೀದಿ, “ನೀವು ಅವರನ್ನು ನೋಡಲಿಲ್ಲವೇ? ಸೋತರೂ ತಾನು ಗೆದ್ದಿದ್ದೇನೆ ಎಂದು ಟ್ರಂಪ್ ಹೇಳುತ್ತಲೇ ಇದ್ದಾರೆ. ಅವರ ಬೆಂಬಲಿಗರು ಅಮೆರಿಕ ಸಂಸತ್​ ಭವನದ ಮೇಲೆ ದಾಳಿ ನಡೆಸಿದ್ದಾರೆ.

ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಘಟನೆಯನ್ನು ಇಡೀ ವಿಶ್ವದ ಪ್ರಮುಖ ನಾಯಕರು ಖಂಡಿಸಿದ್ದರು. ಆದರೆ, ಮಮತಾ ಬ್ಯಾನರ್ಜಿ ಇದೀಗ ಬಿಜೆಪಿ ಬೆಂಬಲಿಗರನ್ನು ಡೊನಾಲ್ಡ್​ ಟ್ರಂಪ್ ಅಭಿಮಾನಿಗಳಿಗೆ ಹೋಲಿಕೆ ಮಾಡಿ ಮಾತನಾಡುವ ಮೂಲಕ ಬಿಜೆಪಿಯನ್ನು ಅಪಹಾಸ್ಯಕ್ಕೆ ಗುರಿಮಾಡಿದ್ದಾರೆ.

ಇನ್ನು ಹರಿಯಾಣ ಪಂಜಾಬ್ ರೈತರು ಒಂದು ತಿಂಗಳಿನಿಂದ ಬಿಸಿಲು ಮತ್ತು ಮಳೆಯೆನ್ನದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವರು ಚಳಿಯಲ್ಲಿ ಮೃತಪಟ್ಟಿದ್ದಾರೆ, ಆದರೆ, ನಮ್ಮ ರೈತ ಬಾಂಧವರಿಗೆ ಈವರೆಗೆ ನ್ಯಾಯ ಧಕ್ಕಿಲ್ಲ ಎಂದು ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಯ ವಿರುದ್ಧವೂ ಕಿಡಿಕಾರಿದ್ದಾರೆ.

ಬಿಜೆಪಿಯನ್ನು ಜಂಕ್ ಪಾರ್ಟಿ ಎಂದು ಜರಿದಿರುವ ಅವರು, ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ. ಏಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟದಲ್ಲಿ ಮುಂದೆಯೆ ನಿಲ್ಲುತ್ತೇನೆ. ಅವರಿಗೆ ಬಂಗಾಳವನ್ನು ಮಾರಾಟ ಮಾಡಲು ನಾನು ಬದುಕಿರುವವರೆಗೆ ಬಿಡುವುದಿಲ್ಲಎಂದು ಸವಾಲು ಹಾಕಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ