NEWSಶಿಕ್ಷಣ-

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆಗೆ  ಆದ್ಯತೆ

ಡಿಡಿಪಿಐ ಮತ್ತು ಬಿಇಒಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ l  ಸಚಿವ ಸುರೇಶ್‍ಕುಮಾರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು:  ಕೊರೊನಾ ಸಂಕಷ್ಟದ ನಡುವೆಯು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್  ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಓಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅನಂತರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕುಡಿಯಲು ಮನೆಯಿಂದಲೇ ಬಿಸಿ ನೀರನ್ನು ತರುವಂತೆ ಸೂಚಿಸಬೇಕು. ಜತೆಗೆ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರಲ್ಲದೇ ಕೇಂದ್ರಗಳಲ್ಲಿ ಶೌಚಾಲಯದ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು.

ಪರೀಕ್ಷಾ ಕೇಂದ್ರದಿಂದ ಮನೆ ದೂರವಿದ್ದು, ಯಾವುದೇ ಸಂಚಾರ ವ್ಯವಸ್ಥೆ ಇಲ್ಲದಿದ್ದರೆ, ಅಂತಹ ವಿದ್ಯಾರ್ಥಿಗಳ ವಿವರ ಪಡೆದು ಶಾಲೆಯ ಮುಖ್ಯೋಪಾದ್ಯಯರು ರೂಟ್ ಮ್ಯಾಪ್ ಸಿದ್ಧಪಡಿಸಬೇಕು.  ಅವರ ಬಳಿ ಇರುವ ಪ್ರವೇಶ ಪತ್ರವನ್ನು ಉಚಿತ ಬಸ್‍ಪಾಸ್‍ಗಳ ಪರಿಗಣಿಸಲು ನಿರ್ಧರಿಸಲಾಗಿದೆ. ಮಕ್ಕಳ ಜೊತೆ ಬರುವ ಪೋಷಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತ 500 ಮೀಟರ್ ವ್ಯಾಪ್ತಿ 144 ಜಾರಿಯಲ್ಲಿರುತ್ತದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳು ತಯಾರಿಸಿರುವ  8.50 ಲಕ್ಷ ಮಾಸ್ಕ್‍ಗಳನ್ನು ಪರೀಕ್ಷೆಗೆ ಬರೆಯುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗುವುದು. ಅನಾರೋಗ್ಯದ ಸೂಚನೆ ಕಂಡು ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಕೊಠಡಿ ಮೇಲ್ವಿಚಾರಕರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್ ಬಳಸಬೇಕು ಎಂದು   ತಿಳಿಸಿದರು.

ಕಂಟೈನ್‍ಮೆಂಟ್ ಜೋನ್‍ನಲ್ಲಿ ಯಾವುದೇ ಪರೀಕ್ಷಾ ಕೇಂದ್ರವು ಇರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಪಾಲಿಸುವಲ್ಲಿ ಪರೀಕ್ಷಾ ಕೊಠಡಿಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ  ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವಲಸೆ ಕಾರ್ಮಿಕರ ಮಕ್ಕಳು ಪರೀಕ್ಷೆಯಿಂದ ತಪ್ಪಿಸಿಕೊಂಡರೆ ಜುಲೈನಲ್ಲಿ ಪರೀಕ್ಷೆ ನಡೆಸಲಾಗುವುದು. ಅಂತಹವರನ್ನು ಫ್ರೆಶರ್ಸ್ ವಿದ್ಯಾರ್ಥಿಗಳು ಎಂದು ಪರಿಗಣಿಸಲಾಗುವುದು. ಪಠ್ಯಪುಸ್ತಕವನ್ನು ಶಾಲೆ ಆರಂಭಿಸಿದ ಮೊದಲ ವಾರದಲ್ಲಿ ವಿತರಿಸಲಾಗುವುದು ಎಂದು   ತಿಳಿಸಿದರು.

ಶಾಸಕ ಜಿ.ಬಿ ಜ್ಯೋತಿಗಣೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಡಯಟ್‍ನ ಪ್ರಾಂಶುಪಾಲ ಮಂಜುನಾಥ್, ಡಿಡಿಪಿಐಗಳಾದ ಎಂ.ಆರ್. ಕಾಮಾಕ್ಷಿ, ರೇವಣ ಸಿದ್ಧಪ್ಪ ಸೇರಿದಂತೆ ತಾಲೂಕು ಬಿ.ಇ.ಒಗಳು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್