NEWSನಮ್ಮರಾಜ್ಯಸಂಸ್ಕೃತಿ

ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ಎರಡು ದಿನ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ಆಗಸ್ಟ್ 19 ಮತ್ತು 21 ರಂದು ನಿರ್ಬಂಧಿಸಲಾಗಿದೆ.

ಬುಧವಾರ ಅಮಾವಾಸ್ಯೆ ಹಾಗೂ ಶುಕ್ರವಾರ ಸ್ವರ್ಣಗೌರಿ ವೃತದ ಹಿನ್ನೆಲೆ ಬೆಟ್ಟಕ್ಕೆ ಭಕ್ತರು ಹೆಚ್ಚಾಗಿ ಬರುವ  ಕಾರಣ ನಿರ್ಬಂಧ ವಿಧಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹೆಚ್ಚು ಭಕ್ತರು ಆಗಮಿಸುವುದರಿಂದ ಸಾಮಾಜಿಕ ಅಂತರ ಹಾಗೂ ಇತರ ಕೊರೊನಾ ನಿಯಮಗಳ ಪಾಲನೆ ಕಷ್ಟಸಾಧ್ಯ. ಹೀಗಾಗಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಇದರ ಭಾಗವಾಗಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ನಿನ್ನೆ (ಭಾನುವಾರ) ಒಂದೇ ದಿನ ಮೈಸೂರಿನಲ್ಲಿ 620 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,535ಕ್ಕೆ ಹೆಚ್ಚಳವಾಗಿದೆ. 3,756 ಸಕ್ರಿಯ ಪ್ರಕರಣಗಳಿವೆ.

ಮೈಸೂರಿನಲ್ಲಿ ನಿನ್ನೆ ಒಂದೇ ದಿನ 10 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈ ವರೆಗೆ ಒಟ್ಟು 304 ಜನ  ಸೋಂಕಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ ಎಂದು ಡಿಸಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?