ಉಡುಪಿ: ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಡಿಸ್ಚಾರ್ಜ್ ಪ್ರಮಾಣ ಹೆಚ್ಚಿದ್ದು, ಮುಂದಿನ 10 ದಿನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಾಸಿಟಿವ್ ಪ್ರಕರಣಗಳು ಡಿಸ್ಚಾರ್ಜ್ ಆಗುವ ಸಾದ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್‌ನಿಂದ ಎಂತಹದೇ ಸಂದರ್ಭದಲ್ಲೂ ಸಾವು ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯನ್ನು ನಾನ್ ಕೋವಿಡ್ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರನಿಧಿಗಳು ಸಹಕಾರದಿಂದ ಪ್ರಯತ್ನಿಸಲಾಗುತ್ತಿದೆ ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಜಿಲ್ಲೆಯಲ್ಲಿ ಇದುವರೆಗೆ 12,540 ಮಂದಿಯನ್ನು ಕೋವಿಡ್-19 ಪರೀಕ್ಷೆ ಮಾಡಿದ್ದು, ಅದರಲ್ಲಿ 11,566 ವರದಿ ನೆಗಿಟಿವ್ ಬಂದಿದ್ದು, 946 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ, ಇದರಲ್ಲಿ ಶೇ. 98 ಮಹಾರಾಷ್ಟ್ರದಿಂದ ಬಂದವರಲ್ಲಿ ಕಂಡುಬಂದಿದ್ದು, ಇಂದಿನವರೆಗೆ 274 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಕ್ವಾರಂಟೈನ್ ಕೇಂದ್ರದಲ್ಲಿನ ಟೆಸ್ಟ್ ಉಡುಪಿ ಜಿಲ್ಲೆಯಲ್ಲಿ ನಡೆದಿದೆ , ಸೋಂಕು ಕಂಡುಬಂದ 929 ಮಂದಿಯಲ್ಲಿ ರೋಗ ಲಕ್ಷಣಗಳು ಕಂಡುಬಂದಿಲ್ಲ ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಕಂಡ ಬಂದ ವ್ಯಕ್ತಿಯ ಮನೆಯನ್ನು ಮಾತ್ರ ಸೀಲ್‌ಡೌನ್ ಮಾಡುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸ್ಪಷ್ಟ ನಿರ್ದೇಶನ ನೀಡಲಾಗುವುದು. ಉಡುಪಿಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ 10 -12 ದಿನದಲ್ಲಿ ಕಾರ್ಯಾರಂಭ ಮಾಡಲಿದೆ, ಈ ಬಗ್ಗೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಸಹ ನೀಡಲಾಗಿದೆ ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕುಂದಾಪುರ ಮತ್ತು ಕಾರ್ಕಳದಲ್ಲಿನ ಆಸ್ಪತ್ರೆಗೆ , ಉಡುಪಿ ಜಿಲ್ಲಾಸ್ಪತ್ರೆಯ ಪ್ರಮಾಣದಲ್ಲಿಯೇ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಕುರಿತಂತೆ ಪ್ರಯತ್ನ ಮಾಡಲಾಗುವುದು, ಕೋವಿಡ್ ವಿರುದ್ದದ ಹೋರಾಟದಲ್ಲಿ ಅಗತ್ಯವಿರುವ ಆಶಾ, ಆರೋಗ್ಯ ಕಾರ್ಯಕರ್ತರು, ಎಎನ್‌ಎಂ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳುವ ಕುರಿತಂತೆ ಆದೇಶ ನೀಡಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ಕೋವಿಡ್-19 ಸಮಸ್ಯೆಯನ್ನು ಜಿಲ್ಲಾಡಳಿತ ಅತ್ಯಂತ ಸಮರ್ಥವಾಗಿ ಎದುರಿಸಿದೆ, ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆ ಅತ್ಯಂತ ಸವಾಲಿನದಾಗಿದ್ದು, ಇದನ್ನು ಅತ್ಯಂತ ದಕ್ಷವಾಗಿ ನಿಭಾಯಿಸಿದ್ದು, ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕ್ಷಮತೆಯಿಂದ ಕಾರ್ಯ ನಿರ್ವಹಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಜಿಲ್ಲಾಡಳಿತ ಕಾರ್ಯವನ್ನು ಅಭಿನಂದಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್,ಬೈAದೂರು ಶಾಸಕ ಸುಕುಮಾರ ಶೆಟ್ಟಿ, ಕರಾವಳಿ ಅಬಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್ ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail