NEWSನಮ್ಮರಾಜ್ಯರಾಜಕೀಯ

ಇಂದು ಸರ್ಕಾರ ವಿರುದ್ಧ ಅವಿಶ್ವಾಸ: ಏನಾಗುವುದು ಕೈ ಐಡಿಯಾ

ಶಾಸಕರಿಗೆ ಎರಡೂ ಪಕ್ಷಗಳಿಂದ ವಿಪ್ ಜಾರಿ: ಕಾದು ನೋಡುವ ನೀತಿಗೆ ಶರಣಾದ ಜೆಡಿಎಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ ಅವಿಶ್ವಾಸ ಮಂಡನೆ ಮಾಡಿರುವ ಹಿನ್ನೆಲೆಯಲ್ಲಿ ಎರಡೂ ಪಕ್ಷ ಶಾಸಕರಿಗೆ ವಿಪ್ ಜಾರಿ ಮಾಡಿವೆ. ಈ ನಡುವೆ ಜೆಡಿಎಸ್‌ ಪಕ್ಷ ಯಾರ ಪರವೂ ನಿಲ್ಲದೆ ತಟಸ್ಥವಾಗಿದ್ದು, ಕಾದು ನೋಡುವ ನಿಯಮಕ್ಕೆ ಶರಣಾಗಿದೆ.

ಇಂದು ಸದನದಲ್ಲಿ ವಿಶ್ವಾಸ ಸಾಬೀತು ಮಾಡಬೇಕಾದ ಹಿನ್ನೆಲೆಯಲ್ಲಿ ಕಲಾಪ ಸಾಕಷ್ಟು ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇದಕ್ಕೆ ಕಾಂಗ್ರೆಸ್‍ನ 23 ಶಾಸಕರು ಎದ್ದು ನಿಂತು ಬೆಂಬಲ ಸೂಚಿಸಿದ್ದರು. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಕೋರಂ ಇದೆ ಎಂದ ಸ್ಪೀಕರ್ ಕಾಗೇರಿ, ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ್ದರು.

ಅವಿಶ್ವಾಸ ಮಂಡನೆ ನಡುವೆಯೇ ನಡೆದ ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಬಿಎಸ್‍ವೈ ಗೌಪ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಬ್ಬರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಕಳೆದ 15 ದಿನದಲ್ಲಿ ಇಬ್ಬರು ನಾಯಕರು ಮೂರನೇ ಬಾರಿಗೆ ಭೇಟಿಯಾಗಿದ್ದಾರೆ. ಸಿಎಂ ಅವರ ಕೊಠಡಿಯಲ್ಲಿ ಅರ್ಧ ಗಂಟೆ ಇಬ್ಬರು ನಾಯಕರು ಮಾತುಕತೆ ನಡೆಸಿದ್ದರು.

ಈ ಕುರಿತಂತೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್‍ವೈ, ಪ್ರತಿ ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ನವರು ಹೀಗೆ ಮಾಡುತ್ತಾ ಇರಲಿ. ಹೀಗೆ ಮಾಡುವವರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತೆ. ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಇತ್ತ ವಿಧಾನ ಮಂಡಲ ಅಧಿವೇಶನ ಕೊನೆಯ ದಿನವಾದ ಇಂದು ವಿಧಾನ ಪರಿಷತ್‌ನಲ್ಲಿ ವಿಧಾನಸಭೆಯಿಂದ ಅಂಗೀಕಾರವಾಗಿರುವ 9 ವಿಧೇಯಗಳು ಮಂಡನೆಯಾಗಲಿವೆ. ವಿಧೇಯಕಗಳ ಮೇಲೆ ಚರ್ಚೆ ನಡೆಯಲಿದೆ. ಉಳಿದಂತೆ ಗಮನ ಸೆಳೆಯುವ ಸೂಚನೆ, ನಿಯಮ 330 ಅಡಿ ಚರ್ಚೆ, ಕೃಷ್ಣ ಮೇಲ್ದಂಡೆ 3 ನೇ ಹಂತದ ಕಾಮಗಾರಿ ಕುರಿತು ನಿನ್ನೆ ನಡೆದ ಚರ್ಚೆ ಮುಂದುವರಿದು ಇಂದು ಮತ್ತೆ ಚರ್ಚೆ ನಡೆಯಲಿವೆ. ಕರ್ನಾಟಕ ಧನವಿನಿಯೋಗ ವಿಧೇಯಕ, ಕರ್ನಾಟಕ ಸಾದಿಲ್ವಾರು ನಿಧಿ ವಿಧೇಯಕ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಧೇಯಕ, ಕರ್ನಾಟಕ ಆರ್ಥಿಕ ಹೊಣೆಗಾರಿಕೆ ವಿಧೇಯಕ ಸೇರಿ 9 ಬಿಲ್ ಗಳು ಮಂಡನೆಯಾಗಿ, ಚರ್ಚೆ ಆಗಲಿದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ