Please assign a menu to the primary menu location under menu

NEWSನಮ್ಮರಾಜ್ಯ

ರೋಟರಿ ರೀ ಬಿಲ್ಡ್ ಕೊಡಗು ಯೋಜನೆಯಡಿ ಮತ್ತೆ 25 ಮನೆಗಳ ಹಸ್ತಾಂತರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ರೀ ಬಿಲ್ಡ್ ಕೊಡಗು ಯೋಜನೆ ಮೂಲಕ ಮತ್ತೆ 25 ಮನೆಗಳನ್ನು ಹಸ್ತಾಂತರ ಮಾಡಲಾಗಿದ್ದು, ಈವರೆಗೂ ರೋಟರಿಯಿಂದ 50 ಮನೆಗಳನ್ನು ಸಂತ್ರಸ್ಥರಿಗೆ ನೀಡಲಾಗಿದೆ.

ಕಳೆದ ವರ್ಷ ಜೂನ್ ನಲ್ಲಿ ಪ್ರಥಮ ಹಂತವಾಗಿ ಮನೆ ಕಳೆದುಕೊಂಡ ಸಂತ್ರಸ್ಥರಿಗೆ ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ 25 ಮನೆಗಳನ್ನು ರೀ ಬಿಲ್ಡ್ ಕೊಡಗು ವತಿಯಿಂದ ನೀಡಲಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದೀಗ ಮಾದಾಪುರ, ಗರಗಂದೂರು ವ್ಯಾಪ್ತಿಯ 25 ಮಂದಿಗೆ ಅವರ ಜಾಗದಲ್ಲಿಯೇ ಹೊಸ ಮನೆ ನಿರ್ಮಾಣ ಮಾಡಿ ಭಾನುವಾರ ಸರಳ ರೀತಿಯಲ್ಲಿ ಹಸ್ತಾಂತರಿಸಲಾಯಿತು ಎಂದು ರೀ ಬಿಲ್ಡ್ ಯೋಜನಾ ಸಮಿತಿ ಅಧ್ಯಕ್ಷ ಡಾ.ರವಿ ಅಪ್ಪಾಜಿ ತಿಳಿಸಿದ್ದಾರೆ.

ಈವರೆಗೂ ವಿವಿಧ ರೋಟರಿ ಕ್ಲಬ್ ಗಳು ನೀಡಿದ ಸಹಾಯ ಧನ ಬಳಸಿ 2.56 ಕೋಟಿ ರೂ. ವೆಚ್ಚದಲ್ಲಿ ಮನೆಗಳನ್ನು ರೋಟರಿ ಮೂಲಕ  ಹ್ಯಾಬಿಟೇಟ್  ಫಾರ್ ಹ್ಯೂಮಾನಿಟಿ ಇಂಡಿಯಾ ಸಂಸ್ಥೆಯು  ನಿರ್ಮಾಣ ಮಾಡಿದೆ.  ಪ್ರತೀ ಮನೆಗೂ 5.5 ಲಕ್ಷ ರೂ. ವೆಚ್ಚ ತಗುಲಿದೆ.

ಅಂತರ ರಾಷ್ಟ್ರೀಯ ರೋಟರಿ ಸಂಸ್ಥೆಯ ಪ್ರಮುಖರು ಹಾಗೂ ಭಾರತದ ರೋಟರಿ ನಾಯಕರ ಬೆಂಬಲದೊಂದಿಗೆ ಈ ಯೋಜನೆ ಕಾರ್ಯಗತಗೊಂಡಿದೆ ಎಂದು ಡಾ.ರವಿ ಅಪ್ಪಾಜಿ ಮಾಹಿತಿ ನೀಡಿದ್ದಾರೆ. ಲಾಕ್‍ಡೌನ್ ನಿಯಮಗಳಂತೆ ಸಭಾ ಕಾರ್ಯಕ್ರಮ ಇಲ್ಲದೇ ಸರಳ ರೀತಿಯಲ್ಲಿ 25 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಿರುವುದಾಗಿಯೂ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ