NEWSಆರೋಗ್ಯನಮ್ಮರಾಜ್ಯ

ಚಿತ್ರದುರ್ಗದಲ್ಲಿ ಕುಸಿದು ಬಿದ್ದ ಕೇಂದ್ರ ಸಚಿವ ಡಿವಿಎಸ್‌: ತುರ್ತು ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್‌ಲಿಫ್ಟ್‌

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಚಿತ್ರದುರ್ಗ: ಆರೋಗ್ಯದಲ್ಲಿ ಏರುಪೇರಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಹೆಚ್ಚಿನ ಮತ್ತು ತುರ್ತು ಚಿಕಿತ್ಸೆಗೆ ಬೆಂಗಳೂರಿಗೆ ಕರೆತರುವ ಪ್ರಯತ್ನ ನಡೆದಿದೆ.

ಏರ್‍ ಆಂಬುಲೆನ್ಸ್ ಮೂಲಕ ಸದಾನಂದ ಗೌಡ ಅವರನ್ನು ಬೆಂಗಳೂರಿಗೆ ಕರೆತಂದು ಹೆಚ್ಚಿನ ಚಿಕಿತ್ಸೆ ಕೊಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಇಂದು ನಡೆಯುತ್ತಿರುವ ಬಿಜೆಪಿ ಕಾರ್‍ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುವ ವೇಳೆ ದುರ್ಗದಲ್ಲಿ ಡಿವಿಎಸ್‌ ಅವರ ಆರೋಗ್ಯ ಏರುಪೇರಾಗಿದೆ. ಈ ವೇಳೆ ಅವರು ಸ್ಥಳದಲ್ಲೇ ಕುಸಿದು ಬಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಚಿತ್ರದುರ್ಗದಲ್ಲಿ ಹೋಟೆಲ್ ಬಳಿ ಕಾರಿನಿಂದ ಇಳಿಯುವ ಸಂದರ್ಭದಲ್ಲಿ ಸಕ್ಕರೆಯ ಅಂಶದಲ್ಲಿ ಆದ ಏರುಪೇರಿನಿಂದ ಸಚಿವರು ಕುಸಿದು ಬಿದ್ದರು ಎಂದು ಮೂಲಗಳು ತಿಳಿಸಿವೆ.

ಡಿವಿಎಸ್ ತಲೆತಿರುಗಿ ಬಿದ್ದಿದ್ದನ್ನು ಕಂಡ ಬೆಂಗಾವಲು ಪಡೆಯ ಸಿಬ್ಬಂದಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು ಎಂದು ಸ್ಥಳದಲ್ಲಿದ್ದ ಸ್ಥಳೀಯರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಸದಾನಂದ ಗೌಡರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಕರೆತರುವ ಪ್ರಯತ್ನ ನಡೆದಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?