ನ್ಯೂಡೆಲ್ಲಿ: ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್(74) ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಬಿಹಾರದ ಲೋಕ ಜನಶಕ್ತಿ ಪಕ್ಷದ ಪಾಸ್ವಾನ್ ಕಳೆದ 5 ದಶಕಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಎನ್ಡಿಎ ಒಕ್ಕೂಟಕ್ಕೆ ಬೆಂಬಲ ನೀಡಿದ್ದ ಅವರು ಕೆಲ ದಿನಗಳ ಹಿಂದೆ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿ ಮೃತಪಟ್ಟ ವಿಚಾರವನ್ನು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಕೆಲ ದಿನಗಳ ಹಿಂದೆ ತಂದೆಯವರು ಒಳಗಾಗಿದ್ದಾರೆ. ಅಗತ್ಯವಿದ್ದಲ್ಲಿ ಮುಂದಿನ ವಾರಗಳಲ್ಲಿ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಚಿರಾಗ್ ತಿಳಿಸಿದ್ದರು. ಆದರೆ ಇಂದು ಇಹಲೋಕವನ್ನು ತೆಜಿಸಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.
पापा….अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
Miss you Papa… pic.twitter.com/Qc9wF6Jl6Z— युवा बिहारी चिराग पासवान (@iChiragPaswan) October 8, 2020