NEWSದೇಶ-ವಿದೇಶರಾಜಕೀಯ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಜೋ ಬಿಡನ್‌ಗೆ ಹತ್ತಿರವಾಗುತ್ತಿದೆ ಗದ್ದುಗೆ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಣಾಹಣಿ ಹೋರಾಟ ರೋಚಕ ಘಟ್ಟ ತಲುಪಿದ್ದು, ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಂದ ಸಾಕಷ್ಟು ಮುಂದಿರುವ ಬಿಡನ್ ಜಾರ್ಜಿಯಾ ಹಾಗೂ ನೆವಾಡಾದಲ್ಲೂ ಮುನ್ನಡೆ ಸಾಧಿಸುತ್ತಿದ್ದಾರೆ. ಇದರೊಂದಿಗೆ ಅಮೆರಿಕ ಅಧ್ಯಕ್ಷ ಗಾದಿ ಮತ್ತೊಮ್ಮೆ ವಶಪಡಿಸಿಕೊಳ್ಳಬೇಕೆಂಬ ಡೋನಾಲ್ಡ್ ಟ್ರಂಪ್‌ ಆಸೆಯನ್ನು ಸಂಪೂರ್ಣವಾಗಿ ಛಿದ್ರಗೊಳಿಸಿದಂತಾಗಿದೆ. ಜಾರ್ಜಿಯಾದಲ್ಲಿ (16), ಈಗಾಗಲೇ ಶೇ 99 ರಷ್ಟು ಮತಗಳನ್ನು ಎಣಿಸಲಾಗಿದೆ.

ಅಮೆರಿಕದ ಪ್ರಮುಖ ರಾಜ್ಯಗಳಲ್ಲಿ ಬಿಡನ್ ಮುಂಚೂಣಿಯಲ್ಲಿದ್ದು, ಇದೀಗ ಜಾರ್ಜಿಯಾ ಹಾಗೂ ನೆವಾಡಾದಲ್ಲೂ ಮೇಲುಗೈ ಸಾಧಿಸಿದ್ದು, ಬಿಡನ್ ವೈಟ್ ಹೌಸ್ ಹಾದಿ ಮತ್ತಷ್ಟು ಸುಗಮವಾಗಿದೆ.

ಇದೇ ಪ್ರವೃತ್ತಿ ಮುಂದುವರಿದರೆ, ಜಾರ್ಜಿಯಾ ಜೋ ಬಿಡನ್ ಕೈ ವಶವಾಗುವ ಸಾಧ್ಯತೆಗಳು ದಟ್ಟವಾಗಿವೆ. ಒಂದು ವೇಳೆ ಅಲ್ಲಿ ಗೆಲವು ಖಚಿತವಾದರೆ, ಅಮೆರಿಕಾ ಅಧ್ಯಕ್ಷ ಸ್ಥಾನ ಜೋ ಬಿಡನ್ ಅವರ ವಶವಾಗಲಿದೆ.

ಇನ್ನೂ ನೆವೆಡಾದಲ್ಲೂ ಗೆದ್ದಿದ್ದೇ ಆದರೆ ಜೋ ಬಿಡನ್ ಪಡೆಯಲಿರುವ ಮತಗಳ ಸಂಖ್ಯೆ 290ಕ್ಕೆ ತಲುಪಲಿದೆ. ಜಾರ್ಜಿಯಾ ಫಲಿತಾಂಶ ಹೊರಬಂದರೆ, ಜಗತ್ತಿನ ‘ದೊಡ್ಡಣ್ಣ” ಅಮೆರಿಕದ ಮುಂದಿನ ಅಧ್ಯಕ್ಷ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ಇನ್ನು ತಾವು ಅಧ್ಯಕ್ಷರಾಗಿ ಪುನರಾಯ್ಕೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಗೊತ್ತಾಗುತ್ತಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚುನಾವಣಾ ಪ್ರಕ್ರಿಯೆ ಮೇಲೆಯೇ ಆರೋಪ ಮಾಡಿದ್ದಾರೆ. ತಮ್ಮ ಮತಗಳನ್ನು ಕದಿಯಲಾಗಿದೆ ಎಂದಿದ್ದಾರೆ. ಆದರೆ ಇದಕ್ಕೆ ಟ್ರಂಪ್ ಬಳಿ ಸಾಕ್ಷಿ, ಪುರಾವೆಗಳಿಲ್ಲ.

ಈ ನಡುವೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಜೊ ಬಿಡನ್, ಯಾರು ಕೂಡ ನಮ್ಮಿಂದ ಪ್ರಜಾಪ್ರಭುತ್ವವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಇಂದು, ಮುಂದು, ಎಂದೆಂದೂ. ಅಮೆರಿಕ ಸಾಕಷ್ಟು ಮುಂದೆ ಬಂದಿದೆ. ಹಲವು ಹೋರಾಟಗಳನ್ನು ಮಾಡಿದೆ. ಅದರಿಂದ ಗೆದ್ದು ಬಂದಿದೆ ಕೂಡ ಎಂದು ಹೇಳಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...