ಮೈಸೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಯ ತಿನರಸೀಪುರ ತಾಲೂಕು ಬನ್ನೂರು ಹೋಬಳಿ ಅತ್ತಹಳ್ಳಿ ಗ್ರಾಮದ ವರುಣ್ ಕೆ. ಗೌಡ ಮೊದಲ ಪ್ರಯತ್ನದಲ್ಲೇ 528ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ವರುಣ್ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವರ್ಷ ಎಂಬಿಬಿಎಸ್ ಪೂರೈಸಿದ್ದಾರೆ ಸಮಾಜದ ದೊಡ್ಡ ವರ್ಗದ ಜನರ ಸೇವೆ ಮಾಡಬೇಕು ಎಂಬ ಆ ಕನಸು ಇತ್ತು ಆದ್ದರಿಂದ ಯುಪಿಎಸ್ಸಿ ಪರೀಕ್ಷೆ ಬರೆದೆ ಮೊದಲ ಪ್ರಯತ್ನದಲ್ಲಿ ರ‍್ಯಾಂಕ್ ದೊರೆಯುವ ನಿರೀಕ್ಷೆ ಇರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ನಮ್ಮದು ಕೃಷಿ ಕುಟುಂಬ. ತಂದೆ ಕುಮಾರಸ್ವಾಮಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮತ್ತು ಕೃಷಿಯೇ ಪ್ರಮುಖ ಉದ್ಯೋಗವಾಗಿದೆ. ಇನ್ನು ತಾಯಿ ಗೃಹಿಣಿ. ಪ್ರಿಲಿಮ್ ಮತ್ತು ಮುಖ್ಯ ಪರೀಕ್ಷೆಯಲ್ಲಿ ಕೋಚಿಂಗ್‌ಗೆ ಹೋಗಿಲ್ಲ. ಮನೆಯಲ್ಲಿಯೇ ಕುಳಿತು ಓದಿದೆ. ಸಂದರ್ಶನ ಎದುರಿಸಲು ಸ್ವಲ್ಪ ಮಾರ್ಗದರ್ಶನ ಪಡೆದುಕೊಂಡೆ ಎಂದು ತಾವು ಸಾಗಿದ ಯುಪಿಎಸ್‌ಸಿ ಪರೀಕ್ಷೆಯಲ್ಲಿನ ಹಾದಿಯನ್ನು ವಿವರಿಸಿದರು.
ಪ್ರಜ್ವಲ್ 636ನೇ ರ‍್ಯಾಂಕ್: ಮೈಸೂರಿನ ವಿಜಯಶ್ರೀಪುರದ ಪ್ರಜ್ವಲ್ ಅವರು 636ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಮೈಸೂರು ಎನ್‌ಐಇ ಕಾಲೇಜಿನಲ್ಲಿ ಬಿಇ (ಮೆಕ್ಯಾನಿಕಲ್) ಪೂರ್ಣಗೊಳಿಸಿರುವ ಪ್ರಜ್ವಲ್ ಬೆಂಗಳೂರಿನ ಕಂಪನಿಯಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಇನ್ನು ಇವರು ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ. ಕಳೆದ ಬಾರಿ ಸಂದರ್ಶನಕ್ಕೆ ಆಯ್ಕೆಯಾಗಿದ್ದರೂ ರ‍್ಯಾಂಕ್ ಲಭಿಸಲಿಲ್ಲ ಎಂದು ತಿಳಿಸಿದ್ದಾರೆ.
ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದರೂ ಕಷ್ಟಪಟ್ಟು ಓದಿದೆ. ತಂದೆ ಹೋಟೆಲ್‌ನಲ್ಲಿ ಸೂಪರ್ ವೈಸರ್. ತಾಯಿ ಗೃಹಿಣಿ. ಕುಟುಂಬದ ಆರ್ಥಿಕ ಸ್ಥಿತಿ ಚೆನ್ನಾಗಿರಲಿಲ್ಲ. ಆದ್ದರಿಂದ ಕೆಲಸದ ನಡುವೆಯೂ ಓದಿಕೊಂಡು ಪರೀಕ್ಷೆ ಬರೆಯಬೇಕಾಗಿತ್ತು. ಈ ಸಾಧನೆ ಖುಷಿ ನೀಡಿದೆ ಎಂದು ತಿಳಿಸಿದರು.
Super olledagli