NEWSಉದ್ಯೋಗನಮ್ಮರಾಜ್ಯರಾಜಕೀಯ

ವೈದ್ಯರ ನಡುವಿನ ವೇತನ ತಾರತಮ್ಯ ಸರಿಪಡಿಸಿ: ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ತಾರತಮ್ಯ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯದ 2000 ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರೊಂದಿಗೆ ಮಾತುಕತೆ ನಡೆಸಿ ಬಿಕ್ಕಟ್ಟು ಪರಿಹರಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು, ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆಗೆ ಆಯುಷ್ ವೈದ್ಯರಿಗೆ ಮಾಸಿಕ 20000 ರೂ. ಅಲೋಪತಿ ವೈದ್ಯರಿಗೆ ಮಾಸಿಕ 60000 ರೂ. ವೇತನ ನೀಡುತ್ತಿರುವುದು  ತಾರತಮ್ಯ ಎಂದು ಆಯುಷ್ ವೈದ್ಯರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರ  ಆಯುಷ್ ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಬೇಕು ಎಂದು ಸಲಹೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ಹೊಣೆ ಗೇಡಿತನ ಪ್ರದರ್ಶಿಸಬಾರದು. ಅಲೋಪತಿ ಮತ್ತು  ಆಯುಷ್ ವೈದ್ಯರ ನಡುವಣ ಅಜಗಜಾಂತರ ವೇತನ ತಾರತಮ್ಯ ಸಹಜವಾಗಿಯೇ ಕಂದಕ ಸೃಷ್ಟಿಸಿದೆ. ಸರ್ಕಾರ ಕೂಡಲೇ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ  ನೀಡುವುದು ಬಲು ಕಷ್ಟವಾಗುತ್ತದೆ ಎಂದು ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...