NEWSನಮ್ಮರಾಜ್ಯ

62 ಪೌರಕಾರ್ಮಿಕರಿಗೆ ಕೊರೊನಾ ಪಾಸಿಟಿವ್‌  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  62 ಮಂದಿಗೆ ಕೋವಿಡ್ ಸೋಂಕಿರುವುದು ದೃಢ ಪಟ್ಟಿದ್ದು, ವೈದ್ಯರ ಸಲಹೆಯಂತೆ A Symptomatic, Mild Symptomatic ಇರುವವರನ್ನು ಕೋವಿಡ್ ಆರೈಕೆ ಕೇಂದ್ರಗಳಿಗೆ ಕಳಿಸಲಾಗಿದೆ.  ಇನ್ನು ಕೆಲವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ಸಂಬಂಧ  ಜುಲೈ  30 ಹಾಗೂ 31 ರಂದು ಒಟ್ಟು 3,345 ಪೌರಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ  62 ಮಂದಿಗೆ ಕೊರೊನಾ ಸೋಂಕು ಇರುವುದು ತಿಳಿಯಿತು ಎಂದು ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್‌ಗಳಲ್ಲಿ ದಿನನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯ ಸಂಗ್ರಹಣೆ ಮತ್ತು ಬೀದಿ ಗುಡಿಸುವ ಕಾರ್ಯದಲ್ಲಿ ತೊಡಗಿರುವ ಹಲವು ಪೌರಕಾರ್ಮಿಕರು  ಕೋವಿಡ್ -19 ಸೋಂಕಿನಿಂದ  ಒಳಗಾಗುತ್ತಿರುವುದು ಗಮನಕ್ಕೆ ಬಂದಿದೆ  ಎಂದು ತಿಳಿಸಿದರು.

ಇನ್ನು ಎಲ್ಲಾ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಪೈಕಿ Covid ರೋಗ ಲಕ್ಷಣಗಳಿರುವ ಮತ್ತು Comorbidities (50 ವರ್ಷ ಮೇಲ್ಪಟ್ಟ, ರಕ್ತದೊತ್ತಡ, ಮಧು ಮೇಹ ಇನ್ನಿತರೆ) ಇರುವ ಪೌರ ಕಾರ್ಮಿಕರನ್ನು ಆದ್ಯತೆ ಮೇರೆಗೆ ಪರಿಗಣಿಸಿ ಮತ್ತು ಉಳಿದ ಪೌರ ಕಾರ್ಮಿಕರನ್ನು ಕೆಲಸ ನಿರ್ವಹಿಸುವ ಸಮಯದಲ್ಲಿ ಹಂತ ಹಂತವಾಗಿ Covid Rapid Antigen Test (RAT) ಮಾಡಲಾಗುತ್ತದೆ ಎಂದರು.

Leave a Reply

error: Content is protected !!
LATEST
ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ- ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಬೆಂಗಳೂರು ಗ್ರಾಮಾಂತರ: ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ: ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾನಸಿಕ ಆರೋಗ್ಯ ಸಮಾಲೋಚಕರ  ಹುದ್ಧೆಗೆ ಅರ್ಜಿ ಆಹ್ವಾನ ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ...