ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದೇ 22ರಂದು ಕೊನೆಗೊಳ್ಳಲಿರುವ ಕೊರೊನಾ ಲಾಕ್ಡೌನ್ ಮತ್ತೆ ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದಲ್ಲಿ ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈಗ ಜಾರಿಯಲ್ಲಿರುವ ಲಾಕ್ಡೌನ್ ಮುಗಿದ ಬಳಿಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಕ್ಡೌನ್ ಇರುವುದಿಲ್ಲ. ಲಾಕ್ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.
ಇನ್ನು ಮೊನ್ನೆವರೆಗೂ ಬಿಬಿಎಂಪಿ ಆಯುಕ್ತರಾಗಿದ್ದ ಅನಿಲ್ ಕುಮಾರ್ ಅವರು ಕೊರೊನಾ ಸೋಂಕು ಹರಡುವುದನ್ನು ತಡೆಯಲು ನಗರದಲ್ಲಿ ಲಾಕ್ಡೌನ್ ಅನಿವಾರ್ಯ ಎಂದು ಸಲಹೆ ನೀಡಿದ್ದರು. ಅವರನ್ನು ಶನಿವಾರವಷ್ಟೇ ಸರ್ಕಾರ ವರ್ಗಾವಣೆ ಮಾಡಿತು.